Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಮಗಳೂರು: ವಾಜಪೇಯಿ ಲೇಔಟ್‌ನಲ್ಲಿ ನಡುರಸ್ತೆ ಲಾಂಗ್‌ನಿಂದ ಕೇಕ್ ಕತ್ತರಿಸಿದ ಪುಡಾರಿ; ಮಹಮದ್ ಸಮೀರ್ ವಿರುದ್ಧ ಕೇಸ್ ದಾಖಲು!

Spread the love

ಚಿಕ್ಕಮಗಳೂರು: ಚಿಕ್ಕಮಗಳೂರಿನ ವಾಜಪೇಯಿ ಲೇಔಟ್‌ನಲ್ಲಿ ಯುವಕರ ಗುಂಪೊಂದು ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಡಿದ್ದು, ಪುಂಡಾಟ ಮೆರೆದ ಪುಡಾರಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಿನ್ನೆ ಮಧ್ಯರಾತ್ರಿ ಮಹಮದ್ ಸಮೀರ್ ಎಂಬ ಯುವಕ ರೌಡಿ ಸ್ಟೈಲ್‌ನಲ್ಲಿ ಕಾರಿನಿಂದ ಕೆಳಗಿಳಿದು ಲಾಂಗ್‌ನಿಂದ ಕೇಕ್ ಕತ್ತರಿಸಿದ್ದಾನೆ. ನಡು ರಸ್ತೆಯಲ್ಲೇ ಸುಮಾರು 5 ಕೆಜಿಗೂ ಅಧಿಕ ತೂಕದ ಬೃಹತ್ ಕೇಕ್ ಕತ್ತರಿಸಲಾಗಿದ್ದು, ಈ ವೇಳೆ 10ಕ್ಕೂ ಹೆಚ್ಚು ಯುವಕರು ಸ್ಥಳದಲ್ಲಿದ್ದರು. ಇದನ್ನು ವಿಡಿಯೋ ಮಾಡಿದ್ದ ಯುವಕರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು, ಸಾರ್ವಜನಿಕ ರಸ್ತೆಯಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಆರೋಪದ ಮೇಲೆ ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ಜನರಲ್ಲಿ ಭೀತಿ ಹುಟ್ಟಿಸಿ, ಶಾಂತಿ ಭಂಗ ಮಾಡಿದ ಆರೋಪದ ಮೇಲೆ ಯುವಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *