ಶಿಕ್ಷಕನ ಈ ಪರೀಕ್ಷೆ ಪಾಸ್ ಆದ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ!

ಕೊಪ್ಪಳ: ತಾಲ್ಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಚಿಲವಾಡಗಿ ತಮ್ಮ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ವಿಮಾನದ ಮೂಲಕ ಕರೆದುಕೊಂಡು ಹೋಗಲಿದ್ದು, ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸೋಮವಾರ 5ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಲಿಖಿತ ಪರೀಕ್ಷೆ ನಡೆಸಲಾಯಿತು.

ಪರೀಕ್ಷೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ತಾಲ್ಲೂಕಿನ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ.ಎಂ.ಅಲಿ ಸ್ವತಃ ಪ್ರಶ್ನೆಪತ್ರಿಕೆ ತಯಾರಿಸಿ ಪರೀಕ್ಷೆ ನಡೆಸಲಾಯಿತು. ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದ ಐದರಿಂದ ಎಂಟನೇ ತರಗತಿಯಲ್ಲಿನ ತಲಾ ಆರು ಜನ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲಾಗುತ್ತದೆ.
‘ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಬೇಕು ಹಾಗೂ ಸ್ಪರ್ಧಾ ಮನೋಭಾವ ಮೂಡಬೇಕು ಎನ್ನುವ ಕಾರಣದಿಂದ ಲಿಖಿತ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದವರನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುವುದು’ ಎಂದು ಬೀರಪ್ಪ ಅಂಡಗಿ ತಿಳಿಸಿದರು.
