Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ – DNA ಎಂಟರ್‌ಟೈನ್ಮೆಂಟ್ ಮತ್ತು ಆರ್‌ಸಿಬಿ ಹೈಕೋರ್ಟ್‌ಗೆ ರಿಟ್ ಅರ್ಜಿ

Spread the love

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಡಿಎನ್ಎ ಎಂಟರ್​ಟೈನ್ಮೆಂಟ್ ನೆಟ್​ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್​​ ಹೈಕೋರ್ಟ್​​ ಗೆ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿವೆ.

ಡಿಎನ್ಎ ಎಂಟರ್​ಟೈನ್ಮೆಂಟ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ  ಯೋಜನೆ ಸರ್ಕಾರ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ದು ಆಗಿದೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು ಎಂದು ರಿಟ್ ಅರ್ಜಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದೆ.ಭಾರತ ಟಿ20 ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ವಿಕ್ಟರಿ ಪರೇಡ್ ನಡೆಸಲಾಗಿತ್ತು. DNA ಆಯೋಜಿಸಿದ್ದ ಪರೇಡ್​ ನಲ್ಲಿ 3 ಲಕ್ಷ ಜನರಿದ್ದರೂ ಯಾವುದೇ ಅವಘಡಗಳಾಗಿರಲಿಲ್ಲ. ವಾಂಖೆಡೆ ಸ್ಟೇಡಿಯಂನ ಪ್ರೇಕ್ಷಕರ ಸಾಮರ್ಥ್ಯ 32,000 ಇದ್ರೂ ಸಮಸ್ಯೆ ಆಗಿರಲಿಲ್ಲ ಎಂದು ಡಿಎನ್ಎ ಎಂಟರ್​ಟೈನ್ಮೆಂಟ್ ಎಂದು ಹೈಕೋರ್ಟ್ ಗೆ ತಿಳಿಸಿದೆ.ಆರ್‌ಸಿಬಿ ವಿಕ್ಟರಿ ಪರೇಡ್ ನಡೆಸಲು ಅನುಮತಿಗಾಗಿ ಜೂನ್ 3ರಂದು ಪತ್ರ ಬರೆಯಲಾಗಿತ್ತು. ತೆರೆದ ಬಸ್​ ನಲ್ಲಿ ಪರೇಡ್ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರು. ರಾಜ್ಯ ಸರ್ಕಾರ ವಿಧಾನಸೌಧದ ಮುಂದೆ ಕಾರ್ಯಕ್ರಮಕ್ಕೆ ನಿರ್ಧರಿಸಿತು. ಪೊಲೀಸರು ವಿಧಾನಸೌಧದ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಿದರು. ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ಇರಲಿಲ್ಲ. ಡಿಎನ್ಎ ಸಂಸ್ಥೆಯಿಂದಲೇ 584 ಖಾಸಗಿ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ ಎಂದು ಆರೋಪಿಸಿದೆ.ಆರ್‌ಸಿಬಿ ಸಿಒಒ ರಾಜೇಶ್ ಮೆನನ್, ನಿಖಿಲ್ ಸೋಸಲೆ, ಡಿಎನ್‌ಎ, ಸುನೀಲ್, ಕಿರಣ್‌ ಕುಮಾರ್, ಶಮಂತ್ ಮಾವಿನಕೆರೆ ಎಫ್‌ಐಆರ್ ರದ್ದು ಕೋರಿ ರಿಟ್ ಅರ್ಜಿಗಳ ಸಲ್ಲಿಕೆ ಮಾಡಿದ್ದು, ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *