Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿತ್ರದುರ್ಗ: ಮೊಳಕಾಲ್ಮೂರು ಬಳಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು!

Spread the love

ಮೊಳಕಾಲ್ಮೂರು : ರಾಷ್ಟ್ರೀಯ ಹೆದ್ದಾರಿಯ ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ಬೊಲೆರೋ ವಾಹನವೊಂದು ಹಿಂಬದಿಯಿಂದ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ಬಳ್ಳಾರಿ ಮೂಲದ ಒಂದೇ ಕುಟುಂಬದ ಸದಸ್ಯರೆಂದು ಗುರುತಿಸಲಾಗಿದೆ. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16) ಹಾಗೂ ಕಂದಮ್ಮಗಳಾದ ಪೂಜಾ (4 ವರ್ಷ) ಮತ್ತು ಕೇವಲ ಒಂದೂವರೆ ವರ್ಷದ ಹಸುಗೂಸು ಪರುಶುರಾಮ (1.5 ವರ್ಷ) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *