Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಚಾಲಕ ಮತ್ತು ಕ್ಲೀನರ್ ದಾರುಣ ಸಾ*ವು!

Spread the love

ಚಿತ್ರದುರ್ಗ, ಆಗಸ್ಟ್  21: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ. ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ ಬಸ್‌ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಐಲ್ಯಾಂಡ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿತ್ತು. ಬಸ್‌ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆ ಬಳಿಕ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ.
ಕೇರಳ ಮೂಲದ ವಿದ್ಯಾರ್ಥಿನಿಯರು ಗೋವಾ ಪ್ರವಾಸಕ್ಕೆ ತೆರಳಿ, ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್‌ನ್ನು ಮೇಲೆತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *