Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ಓದಿಕೊ’ ಎಂದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹ*ತ್ಯೆ: ಹಾವೇರಿಯಲ್ಲಿ ಘೋರ ದುರಂತ!

Spread the love

ಹಾವೇರಿ: ಪರೀಕ್ಷೆಯ ಒತ್ತಡ, ಪೋಷಕರ ಹಿತನುಡಿಯನ್ನೇ ತಪ್ಪಾಗಿ ಭಾವಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಮರೋಳ ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಬಾಲಣ್ಣನವರ (16) ಮೃತಪಟ್ಟ ದುರ್ದೈವಿ.

ಪೋಷಕರ ಬುದ್ಧಿಮಾತಿಗೆ ಮನನೊಂದ ಬಾಲಕಿ

ಮೃತ ಬಾಲಕಿ ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿವೆ, ಸಮಯ ವ್ಯರ್ಥ ಮಾಡದೆ ಸರಿಯಾಗಿ ಓದಿಕೊ ಎಂದು ಪೋಷಕರು ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಪೋಷಕರು ಪದೇ ಪದೆ ಓದಿನ ಬಗ್ಗೆ ಒತ್ತಡ ಹೇರಿದ್ದರಿಂದ ಮನನೊಂದ ಬಾಲಕಿ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ವಿಷ ಸೇವಿಸಿದ್ದಾಳೆ.

ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಸಾವು

ವಿಷ ಸೇವಿಸಿದ ಬಾಲಕಿಯನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.


Spread the love
Share:

administrator

Leave a Reply

Your email address will not be published. Required fields are marked *