Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿನಿಮಾ ಟಿಕೆಟ್ ದರ ವಿವಾದ: ಹೆಚ್ಚುವರಿ ಹಣ ಮರಳಿಸಲು ಹೈಕೋರ್ಟ್ ಸೂಚನೆ

Spread the love

ಸಿನಿಮಾ ಮಂದಿರದಲ್ಲಿ ಏಕರೂಪ ಟಿಕೆಟ್ ದರ ನಿಗದಿ ಆದೇಶವನ್ನು ಸರ್ಕಾರ ಹೊರಡಿಸಿತ್ತು. ಈ ಆದೇಶವನ್ನು ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಸದ್ಯ ರಾಜ್ಯ ಸರ್ಕಾರದ ಈ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸೇರಿದಂತೆ ಅನೇಕ ಸಿನಿಮಾಗಳಿಗೆ ದುಬಾರಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈಗ ಈ ವಿಚಾರದಲ್ಲಿ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಟಿಕೆಟ್ ದರ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮೇಲ್ಮವಿ ಸಲ್ಲಿಕೆ ಮಾಡಿದೆ. ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್ ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​ಗೆ ಹೈಕೋರ್ಟ್ ನೋಟಿಸ್ ನೀಡಿದೆ.

200 ರೂಪಾಯಿಗಿಂತ (ಶೇ.18 ಜಿಎಸ್​ಟಿ ಸೇರಿದರೆ 236 ರೂಪಾಯಿ) ಹೆಚ್ಚಿನ ಹಣ ಸಂಗ್ರಹ ಹೈಕೋರ್ಟ್ ತೀರ್ಪಿಗೆ ಒಳಪಡುತ್ತದೆ ಎಂದು ಕೋರ್ಟ್ ಹೇಳಿದೆ. ಒಂದೊಮ್ಮೆ ಅರ್ಜಿ ವಿಚಾರಣೆಯ ಬಳಿಕ ಸರ್ಕಾರದ ಪರ ಅಂತಿಮ ತೀರ್ಪು ಬಂದರೆ ಪ್ರೇಕ್ಷಕನಿಂದ ಪಡೆದ ಹೆಚ್ಚುವರಿ ಹಣ ಮರಳಿಸಬೇಕು ಎಂದು ಸೂಚನೆ ನೀಡಲಾಗಿದೆ.  ಈ ಬಗ್ಗೆ ಚಿತ್ರಮಂದಿರದಲ್ಲಿ ಪ್ರಕಟಿಸಲು ಕೋರ್ಟ್ ಸೂಚನೆ ನೀಡಿದೆ.

ಸರ್ಕಾರದ ವಾದ ಏನು?

ಸರ್ಕಾರದ ಪರ ಎಎಜಿ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದ್ದಾರೆ. ‘ಸರ್ಕಾರದ ನಿಯಮ ಕಾನೂನುಬದ್ಧ ಆಗಿದೆ’ ಎಂದು ಕೋರ್ಟ್​ಗೆ ಮನವರಿಕೆ ಮಾಡಿದ್ದಾರೆ. ವಾಣಿಜ್ಯ ಮಂಡಳಿ ಪರ ಹಿರಿಯ ವಕೀಲ ವಿ.‌ಲಕ್ಷ್ಮೀನಾರಾಯಣ ವಾದ ಮಾಡಿದ್ದಾರೆ. ‘ವಾಣಿಜ್ಯ ಮಂಡಳಿ ಮನವಿ ಮೇರೆಗೆ ಸರ್ಕಾರ ದರ ನಿಗದಿ ಮಾಡಿದೆ. ಹೀಗಾಗಿ ದರ ನಿಗದಿ ಆದೇಶಕ್ಕೆ ನೀಡಿದ ತಡೆಯಾಜ್ಞೆ ತೆರವು ಮಾಡಬೇಕು’ ಎಂದು ಅವರು ಕೋರಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *