Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕನಕದಾಸರ ಕರ್ಮಭೂಮಿ ಕಾಗಿನೆಲೆ ಅಭಿವೃದ್ಧಿಗೆ ₹34 ಕೋಟಿ ಕ್ರಿಯಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

Spread the love

ಬೆಂಗಳೂರು/ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಅ.29) ನಡೆದ ಕಾಗಿನೆಲೆ (Kaginele) ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ 34 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.

ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿಯಿರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಸಚಿವರಾದ ಶಿವಾನಂದ ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು


Spread the love
Share:

administrator

Leave a Reply

Your email address will not be published. Required fields are marked *