Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜ. 9ಕ್ಕೆ ವಿಜಯಪುರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ; ಅಧಿಕಾರಿಗಳಿಗೆ ಎಂ.ಬಿ. ಪಾಟೀಲ್ ಸೂಚನೆ

Spread the love

ವಿಜಯಪುರ: ಜನವರಿ 9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಎಲ್ಲಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ಸುಸೂತ್ರವಾಗಿ ನಿರ್ವಹಿಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ್ (M B Patil) ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಯ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಕಾರ್ಯಕ್ರಮಗಳನ್ನು ಕೈಗೊಂಡಿರುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ಸೂಚಿಸಿದರು

ಜಿಲ್ಲಾಧಿಕಾರಿ ಡಾ.ಆನಂದ ಕೆ ಮಾತನಾಡಿ, ಈಗಾಗಲೇ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನಪ್ರತಿನಿಧಿಗಳು ಭಾಗವಹಿಸುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ವೈದ್ಯರನ್ನು ಹಾಗೂ ಸಿಬ್ಬಂದಿ ಇರುವಂತೆ, ಅಗ್ನಿಶಾಮಕ ವಾಹನ ಸೇರಿದಂತೆ ಸಂಬಂಧಿಸಿದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳು ತಮಗೆ ವಹಿಸಿದ ಯಾವುದೇ ಜವಾಬ್ದಾರಿಯನ್ನು ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನಾ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು


Spread the love
Share:

administrator

Leave a Reply

Your email address will not be published. Required fields are marked *