Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಿಕಪ್ ಟ್ರಕ್-ಎಸ್‌ಯುವಿ ನಡುವೆ ಢಿಕ್ಕಿ; 12 ಕೂಲಿ ಕಾರ್ಮಿಕರ ಸಾವು, 23 ಮಂದಿಗೆ ಗಾಯ

Spread the love

ಭೋಪಾಲ್‌: ಇಂಧೋ‌ರ್-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಇತರ 23 ಮಂದಿ ಗಾಯಗೊಂಡಿದ್ದಾರೆ. ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಟ್ರಕ್, ರಾತ್ರಿ 8.30ರ ವೇಳೆಗೆ ಚಿಕಾಲಿಯಾ ಪಥದ ಬಳಿಯ ಪೆಟ್ರೋಲ್ ಬಂಕ್ ಸಮೀಪ ಎಸ್ಯುವಿಗೆ ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಪಿಕಪ್ ಟ್ರಕ್‌ ನಲ್ಲಿ 35 ಕೂಲಿ ಕಾರ್ಮಿಕರು ಇದ್ದರು ಎನ್ನಲಾಗಿದ್ದು, ಅವರು ಈರುಳ್ಳಿ ಹೊಲದಲ್ಲಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದರು ತಿಳಿದು ಬಂದಿದೆ.
“ಅತಿವೇಗವಾಗಿ ಬಂದ ಪಿಕಪ್ ಟ್ರಕ್, ಚಾಲಕನ ನಿಯಂತ್ರಣ ಕಳೆದುಕೊಂಡು ಮೂರು-ನಾಲ್ಕು ಬಾರಿ ಉರುಳಿ ಬಿದ್ದು, ಎದುರುಗಡೆಯ ರಸ್ತೆಗೆ ಮಗುಚಿ ಸ್ಕಾರ್ಪಿಯೊಗೆ ಢಿಕ್ಕಿ ಹೊಡೆದಿದೆ,” ಎಂದು ಧರ್ ಪೊಲೀಸ್ ಅಧೀಕ್ಷಕ ಮಯಾಂಕ್ ಅವಸ್ಥಿ ತಿಳಿಸಿದ್ದಾರೆ.
ಹನ್ನೆರಡು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ 10 ಮಂದಿಯನ್ನು ಇಂಧೋರ್‌ನ ಎಂವೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ 11 ಮಂದಿಗೆ ಧರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು “ಧರ್‌ನಲ್ಲಿ ಸಂಭವಿಸಿದ ಈ ಘಟನೆ ಬಗ್ಗೆ ಕೇಳಿ ತೀವ್ರ ನೋವಾಗಿದೆ. ಈ ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಹೃದಯಾಂತರಾಳದಿಂದ ಶೋಕ ವ್ಯಕ್ತಪಡಿಸುತ್ತಿದ್ದೇನೆ. ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ 4 ಲಕ್ಷ, ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ಮತ್ತು ಇತರ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *