ಕೊಲಂಬಿಯಾ: 7.4 ತೀವ್ರತೆಯ ಪ್ರಬಲ ಭೂಕಂಪ; ಕುಸಿದ ಕಟ್ಟಡಗಳು, ಕನಿಷ್ಠ 20 ಮಂದಿ ಸಾ*ವು!

ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಜನರು ಸಿಲುಕಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಭಯಭೀತರಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ.ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಬೊಗೋಟಾದಿಂದ ಪಶ್ಚಿಮಕ್ಕೆ 400 ಕಿಲೋಮೀಟರ್ ದೂರದಲ್ಲಿರುವ ಸುಮಾರು 4,800 ಜನರಿರುವ ಸ್ಯಾನ್ ಜೋಸ್ ಡೆಲ್ ಪಾಲ್ಮರ್‌ನಲ್ಲಿಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.