ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ; ಸಹಕಾರ ಸಂಘಗಳಿಗೆ ಮೀಸಲಾತಿ, ಕಿತ್ತೂರಿಗೆ 100 ಹಾಸಿಗೆ ಆಸ್ಪತ್ರೆ, ಹಲವು ಯೋಜನೆಗಳಿಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆ ಅಳವಡಿಕೆಗೆ ಅವಕಾಶ ಕಲ್ಪಿಸುವುದು, ಒಬಿಸಿ ನಿರುದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ವಿವಿಧ ಸೌಲಭ್ಯ ಸೇರಿದಂತೆ 17 ವಿಧೇಯಕಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ
ಶೀತಲ ಘಟಕಗಳ ನಿರ್ಮಾಣಕ್ಕೆ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ

2021-22ನೇ ಸಾಲಿನ RIDF ಟ್ರಾಂಚ್-27ರಡಿ ನಬಾರ್ಡ್ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಹಾಗೂ ಹೆಚ್ಚುವರಿ ಮೊತ್ತ ರೂ.47.81 ಕೋಟಿಗಳನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಮೂಲ ವೆಚ್ಚ ರೂ.124.10 ಕೋಟಿಗಳು.
ಒಟ್ಟು ಪರಿಷ್ಕೃತ ಯೋಜನಾ ವೆಚ್ಚ ರೂ.171.91 ಕೋಟಿಗಳು.
ಪರಿಪೂರ್ಣ ಶಿಥಲ ಘಟಕಗಳ ಪೂರ್ಣಗೊಳಿಸುವಿಕೆ ಮತ್ತು ಅತ್ಯುತಮ ಕಾರ್ಯಾಚರಣೆ External Electrification, Installation of Diesel Generator Set, Construction of sump tank, septic tank and soak Fit, Plant Room, Installation of GI perforated sheets over mezzanine floor pipes, Development of loading and unloading areas and Installation of Rigid polyurethane Foam (RPUF) panels ಗೆ ಈ ಹೆಚ್ಚುವರಿ ಕಾಮಗಾರಿಗಳು ಅಗತ್ಯವಿದೆಂದು ಅದಕ್ಕಾಗಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾವನೆ ಮಂಡಿಸಲಾಗಿತ್ತು.
ಕೃಷಿ ಆಯೋಗದ ನಿಯಮಗಳಿಗೆ ತಿದ್ದುಪಡಿ
ಕರ್ನಾಟಕ ಕೃಷಿ ಬೆಲೆ ಆಯೋಗದ ಕರ್ತವ್ಯಗಳು (Duties) ಷರತ್ತು ಮತ್ತು ನಿಬಂಧನೆಗಳನ್ನು (Terms of Reference) ಹೊರಡಿಸಿರುವ ತಿದ್ದುಪಡಿ ಆದೇಶ ಸಂಖ್ಯೆ: AGRI/45/ACT/2025, ದಿನಾಂಕ: 15.05.2025ಕ್ಕೆ ಘಟನೋತ್ತರ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಈ ಕೆಳಗಿನ ಕಾಯ್ದೆಗಳನ್ವಯ ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಮಾರ್ಗೋಪಾಯಗಳನ್ನು ರೂಪಿಸಿ, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು. ಪ್ರಸ್ತುತ ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಅಪ್ರಸ್ತುತವಾಗಿದೆ. ಆದುದರಿಂದ ಕೃಷಿ ಬೆಲೆ ಅಯೋಗದ ಕರ್ತವ್ಯಗಳನ್ನು ಮಾರ್ಪಡಿಸಿ, ತಿದ್ದುಪಡಿ ಆದೇಶ ನೀಡುವುದಕ್ಕೆ ಪ್ರಸ್ತಾಪಿಸಲಾಗಿತ್ತು.
ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ನಿಯಂತ್ರಣ ಅಭಿವೃದ್ಧಿ ಕಾಯ್ದೆ ತಿದ್ದುಪಡಿ (2020)
ಕೇಂದ್ರ ಸರ್ಕಾರದ ರೈತ ಉತ್ಪನ್ನ ಮತ್ತು ವಾಣಿಜ್ಯ ಉತ್ತೇಜನ ಹಾಗೂ ಸೌಲಭ್ಯ ಕಾಯ್ದೆ ಸುಗ್ರೀವಾಜ್ಞೆ (2020)
ರೈತರ ಸಾಮರ್ಥ್ಯಾಭಿವೃದ್ಧಿ ಮತ್ತು ರಕ್ಷಣೆ (ರೈತರ ಬೆಲೆ ಖಾತರಿ ಒಪ್ಪಂದ ಮತ್ತು ಕೃಷಿ ಸೇವೆಗಳು) ಕಾಯ್ದೆ ಸುಗ್ರೀವಾಜ್ಞೆ (2020)
ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೇ (2020)
ಹಿಂದುಳಿದ ಹಾಸ್ಟೇಲ್‌ಗಳಿಗೆ ಹಾಸಿಗೆ ಮತ್ತು ಕಾಟ್‌ಗಳ ಪೂರೈಕೆ
“ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಹೊಸದಾಗಿ ಮಂಜೂರು ಮಾಡಿರುವ ವಿದ್ಯಾರ್ಥಿ ನಿಲಯಗಳಲ್ಲಿನ ನಿಲಯಾರ್ಥಿಗಳಿಗೆ ಅಗತ್ಯತೆಯನುಸಾರ ಆಯವ್ಯಯದಲ್ಲಿ ಒದಗಿಸಿರುವ ರೂ.50.00 ಕೋಟಿಗಳ ಪೈಕಿ, ರೂ.40.00 ಕೋಟಿಗಳ ಅಂದಾಜು ವೆಚ್ಚದಲ್ಲಿ 15000 ಟೂ-ಟಯರ್ ಕಾಟ್‌ಗಳನ್ನು ಹಾಗೂ ರೂ.10.00 ಕೋಟಿಗಳ ಅಂದಾಜು ವೆಚ್ಚದಲ್ಲಿ 15000 ಕಾಯರ್ ಮ್ಯಾಟ್ರೆಸ್‌ಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಇ-ಪೋರ್ಟಲ್ ಮೂಲಕ ಸರಬರಾಜು ಪಡೆಯಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
2024-25ನೇ ಸಾಲಿನಲ್ಲಿ ಮಂಜೂರು ಮಾಡಲಾಗಿರುವ 150 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ, 2025-26ನೇ ಸಾಲಿನಲ್ಲಿ ಹೊಸದಾಗಿ ಮಂಜೂರಾದ 62 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಟೂ-ಟಯರ್ ಕಾಟ್ ಹಾಗೂ ಬೆಡ್‌ಗಳನ್ನು ಒದಗಿಸುವುದು ಅಗತ್ಯವಾಗಿರುವುದರಿಂದ ಸದರಿ ಪ್ರಸ್ತಾವನೆಯನ್ನು ಪ್ರಸ್ತಾಪಿಸಲಾಗಿತ್ತು.
ಹಿಂದುಳಿದ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ಕಾರ್
ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಿ ಆಹಾರ ಕಿಯೋಸ್ಕ್ ಪ್ರಾರಂಭಿಸಲು ವಾಹನ ಒಂದಕ್ಕೆ ಗರಿಷ್ಠ ರೂ.3.00 ಲಕ್ಷಗಳ ಸಹಾಯಧನದ ಮಿತಿಯಲ್ಲಿ ಒಂದೇ ಮಾದರಿಯ ಒಟ್ಟು 1103 ವಾಹನಗಳನ್ನು ಅಂದಾಜು ರೂ.33.09 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಅನುಮೋದನೆ; ಹಾಗೂ ಈ ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನಗಳನ್ನು ಮೇಲಿನ ಕಂಡಿಕೆ: 1.3 ರಲ್ಲಿ ನಿಗಮವಾರು ನಿಗದಿಪಡಿಸಿಕೊಂಡಿರುವ ಭೌತಿಕ ಹಾಗೂ ಆರ್ಥಿಕ ಗುರಿಗಳಿಗೆ 11 ನಿಗಮಗಳ ಪರವಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಇ-ಪೋರ್ಟಲ್ ಮೂಲಕ ಸರಬರಾಜು ಪಡೆದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಹಿಂದುಳಿದ ವರ್ಗಗಳಿಗೆ ಸೇರಿದ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ನಾಲ್ಕು ಚಕ್ರ ವಾಹನ ಖರೀದಿಸಲು, ಆಹಾರ ಕಿಯೋಸ್ಕ್ ಪ್ರಾರಂಭಿಸಲು ಪ್ರತಿ ಫಲಾನುಭವಿಗೆ ಗರಿಷ್ಠ ರೂ.3.00 ಲಕ್ಷ ರೂಪಾಯಿ ಸಹಾಯಧನವನ್ನು ಎಲ್ಲಾ ನಿಗಮಗಳ ಪರವಾಗಿ ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಒಂದೇ ಮಾದರಿಯ ನಾಲ್ಕು ಚಕ್ರದ ವಿದ್ಯುತ್ ಚಾಲಿತ ವಾಹನವನ್ನು ಟೆಂಡರ್ ಆಹ್ವಾನಿಸಿ, ಫಲಾನುಭವಿಗಳಿಗೆ ಒದಗಿಸಲು ಪ್ರಸ್ತಾಪಿಸಲಾಗಿತ್ತು.
ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ
ಕುಟುಂಬ ಸದಸ್ಯರು ಎಂಬ ವ್ಯಾಖ್ಯಾನದಲ್ಲಿ ಸಹೋದರರು, ಸಹೋದರಿಯರು, ಮೊಮ್ಮಗ, ಅವಿವಾಹಿತ ಮೊಮ್ಮಗಳು, ಸೊಸೆ, ವಿಧವಾ ಮಗಳು ಮತ್ತು ವಿಧವಾ ಮೊಮ್ಮಗಳು ಎಂಬ ಪದಗಳ ನಂತರ ವಿವಾಹಿತ ಮಗಳೆಂಬ ಪದಗಳನ್ನು ಸೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ವೈದ್ಯಕೀಯ ಶಿಕ್ಷಣ ನಿರ್ದೇಶಕರ ಸೇವಾ ವಿಸ್ತರಣೆ
ಡಾ|| ಬಿ.ಎಲ್ ಸುಜಾತಾ ರಾಥೋಡ್, ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಇವರು ದಿನಾಂಕ: 30.06.2025 ರಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ್ದು ಇವರನ್ನು ದಿನಾಂಕ: 01.07.2025 ರಿಂದ ಅನ್ವಯಿಸುವಂತೆ ಆರು ತಿಂಗಳ ಅವಧಿಗೆ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಮರು ನೇಮಕಾತಿ ಮಾಡಿ ದಿನಾಂಕ: 30.06.2025 ರಂದು ಅಧಿಸೂಚನೆ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡುವ ಬಗ್ಗೆ ಹಾಗೂ ಸದರಿ ಹುದ್ದೆಯ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸಲು ಅಧಿಕಾರ ಪ್ರತ್ಯಾಯೋಜಿಸುವ ಬಗ್ಗೆ” ಸಚಿವ ಸಂಪುಟವು ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಡಾ|| ಬಿ.ಎಲ್ ಸುಜಾತಾ ರಾಥೋಡ್ ಇವರನ್ನು ದಿನಾಂಕ: 01.07.2025 ರಿಂದ ಅನ್ವಯಿಸುವಂತೆ ಮುಂದಿನ 01 ವರ್ಷದ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಮರುನೇಮಕಾತಿ ಮಾಡಲು ಸಚಿವ ಸಂಪುಟ ಒಪ್ಪಿದೆ.
ಕಿತ್ತೂರಿಗೆ 100 ಹಾಸಿಗೆ ಆಸ್ಪತ್ರೆ
ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕು ಇಲ್ಲಿ 50 ಹಾಸಿಗೆ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು NHM ಅನುದಾನ ರೂ.15.00 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ಸಚಿವ ಸಂಪುಟ ಪ್ರಕರಣ ಸಂ: ಸಿ:19/2023 ದಿನಾಂಕ: 20.01.2023 ರಲ್ಲಿ ಎರಡನೇ ಹಂತದ 50 ಹಾಸಿಗೆ ಆಸ್ಪತ್ರೆ ಕಟ್ಟಡ, ವಸತಿ ಗೃಹ, ಅಡುಗೆ ಮನೆ ಮತ್ತು ಶವಪರೀಕ್ಷೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು SDP ಅನುದಾನ ರೂ.19.00 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಿರುವುದನ್ನು ಮಾರ್ಪಡಿಸಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 100 ಹಾಸಿಗೆಗಳ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು ರೂ.3378.65 ಲಕ್ಷಗಳ ಅನುದಾನದಲ್ಲಿ ನಿರ್ಮಿಸಲು ಹೊಸದಾಗಿ ಟೆಂಡರ್ ಆಹ್ವಾನಿಸಿ ಕೈಗೊಳ್ಳಲು ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆಗೆ ಹಾಗೂ ಪ್ರಸ್ತಾಪಿತ ಕಾಮಗಾರಿಗೆ ಈಗಾಗಲೇ ಅನಗತ್ಯವಾಗಿ ರೂ.321.35 ಲಕ್ಷಗಳ ವೆಚ್ಚವಾಗಿರುವುದಕ್ಕೆ ಸಂಬAಧಿಸಿದAತೆ ತಪ್ಪಿತಸ್ಥ ಅಧಿಕಾರಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು; ರೂ.321.35 ಲಕ್ಷಗಳ ಮೊತ್ತದಲ್ಲಿ ಈಗಾಗಲೇ ಪ್ಲಿಂತ್ ಹಂತದವರೆಗೆ ಪೂರ್ಣಗೊಂಡಿರುವ ಕಟ್ಟಡವನ್ನು ಉದ್ದೇಶಿತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳಿಗೆ ಇತ್ಯಾದಿಗಳಿಗೆ ಹಸ್ತಾಂತರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವೆಚ್ಚವಾದ ಮೊತ್ತ ಮರುಪಾವತಿಸಲು, ನ್ಯಾಯಾಲಯದ ತೀರ್ಪು ಬಂದ ನಂತರ ಜಿಲ್ಲಾಡಳಿತವು ಇತರೆ ಉಪಯೋಗಿ ಇಲಾಖೆ ಹಸ್ತಾಂತರಿಸುವ ಕುರಿತು ಕ್ರಮ ಕೈಗೊಳ್ಳಲು; ಮೊದಲನೇ ಹಂತದ 50 ಹಾಸಿಗೆ ಕಾಮಗಾರಿಯ ಟೆಂಡರ್ ಒಪ್ಪಂದವನ್ನು ನಿಯಮಾನುಸಾರ ಪರಿಶೀಲಿಸಿ ಕಾನೂನು ರೀತ್ಯಾ ಮುಕ್ತಾಯ ಮಾಡಲು; (Terminate/Cancel) ಮತ್ತು ಕಿತ್ತೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ಆಸ್ಪತ್ರೆಯನ್ನಾಗಿ ಅಗತ್ಯ ಹುದ್ದೆಗಳೊಂದಿಗೆ ಮೇಲ್ದರ್ಜೆಗೇರಿಸಿರುವುದನ್ನು ಮುಂದುವರೆಸಲು ಮತ್ತು ವೈದ್ಯಕೀಯ ಉಪಕರಣ ಪೀಠೋಪಕರಣಗಳಿಗೆ ರಾಜ್ಯ ಸರ್ಕಾರದ ಅನುದಾನದಿಂದ ಭರಿಸಲು ಸಚಿವ ಸಂಪುಟವು ಅನುಮೋದಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
2020-21ನೇ ಸಾಲಿನ NHM ROP ಅನುಮೋದನೆಯಾದ ಮತ್ತು 2022-23ನೇ ಸಾಲಿನ SDP ಅಡಿ ಅನುಮೋದನೆಯಾದ ಕಾಮಗಾರಿಗಳನ್ನು ಒಗ್ಗೂಡಿಸಿ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನಲ್ಲಿ ಸಮಗ್ರವಾಗಿ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಪ್ರಸ್ತಾಪಿಸಲಾಗಿದೆ.
ಮೊಳಕಾಲ್ಮೂರು ಆಸ್ಪತ್ರೆ ಮೇಲ್ದರ್ಜೆಗೆ
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯನ್ನು ಜಿಲ್ಲಾ ಬೋಧನಾ ಆಸ್ಪತ್ರೆಯನ್ನಾಗಿ ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಹಸ್ತಾಂತರಿಸಲು ಪರಿಶೀಲಿಸಲಾಗುತ್ತಿರುವುದರಿಂದ ಹಾಗೂ ಮೊಳಕಾಲ್ಮೂರು ತಾಲ್ಲೂಕು ಗಣಿ ಬಾಧಿತ ಪ್ರದೇಶವಾಗಿರುವುದರಿಂದ ಈ ತಾಲ್ಲೂಕಿನಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಪ್ರಸ್ತುತವಿರುವ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಯನ್ನು 200 ಹಾಸಿಗೆಗಳಿಗೆ ಉನ್ನತೀಕರಿಸಿ ಪ್ರತ್ಯೇಕ ಜಿಲ್ಲಾಮಟ್ಟದ ಆಸ್ಪತ್ರೆಯನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದಿಸಿದೆ.
ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸೌಲಭ್ಯ
ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳಿಗೆ ತಿದ್ದುಪಡಿ ಮೂಲಕ ಮುಸ್ಲಿಂಯೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಶೇ.50 ರಷ್ಟು ಕಡ್ಡಾಯವಾಗಿ ಹೊಂದಿರಬೇಕೆAಬ ನಿಯಮವನ್ನು ತೆಗೆದುಹಾಕಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ತಾಂತ್ರಿಕ ಶಿಕ್ಷಣ) (ತಿದ್ದುಪಡಿ) ನಿಯಮಗಳಿಗೆ ತಿದ್ದುಪಡಿ ಮೂಲಕ ಮುಸ್ಲಿಂಯೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಶೇ.50 ರಷ್ಟು ಕಡ್ಡಾಯವಾಗಿ ಹೊಂದಿರಬೇಕೆಂಬ ನಿಯಮವನ್ನು ತೆಗೆದುಹಾಕಲು ಸಚಿವ ಸಂಪುಟವು ಒಪ್ಪಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಅನುಕಂಪದ ನೇಮಕಾತಿ
“ನಕ್ಸಲ್ ನಿಗ್ರಹ ದಳ, ಕಾರ್ಕಳ ಇಲ್ಲಿ “ದ್ವಿತಿಯ ದರ್ಜೆ ಸಹಾಯಕ” ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವಂಗತ ಪಿ.ಜಗದೀಶ್ ಇವರ ಅವಿವಾಹಿತ ಸಹೋದರಿ ಕುಮಾರಿ ತಾರಾ ಇವರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 5ನೇ ಸಡಿಲಿಸಿ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಇದು ಯಾವುದೇ ಪ್ರಕರಣಕ್ಕೂ ಪೂರ್ವ ನಿರ್ದೇಶನವಾಗದ ಷರತ್ತಿಗೊಳಪಡಿಸಿ ಅನುಕಂಪದ ಆಧಾರದ ನೇಮಕಾತಿ ನೀಡಲು; ಸಚಿವ ಸಂಪುಟವು ಅನುಮೋದಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಸರ್ಕಾರಿ ನೌಕರರು ಮೃತರಾದ ಒಂದು ವರ್ಷದ ಅವಧಿಯೊಳಗೆ ಅರ್ಜಿಯನ್ನು ಸಲ್ಲಿಸಿರುವುದಿಲ್ಲ. ಆದರೆ ಮೀನಾಕ್ಷಿ ಪಿ ರವರು ಅರ್ಜಿಯನ್ನು ನಿಗದಿತ ಅವಧಿಯಲ್ಲಿ ಸಲ್ಲಿಸಿರುತ್ತಾರೆ. ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಯಾವುದೇ ಪ್ರಕರಣಕ್ಕೂ ಪೂರ್ವ ನಿದರ್ಶನವಾಗದ ಷರತ್ತಿಗೊಳಪಡಿಸಿ, ಅನುಕಂಪ ಆಧಾರದ ಮೇಲೆ ನೇಮಕಾತಿ ನೀಡಲು ಪ್ರಸ್ತಾಪಿಸಲಾಗಿತ್ತು.
ಕಾರ್ಮಿಕ ರಾಜ್ಯ ವಿಮಾ ಸೊಸೈಟಿ ಸ್ಥಾಪನೆ
ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಇಲಾಖೆಯನ್ನು ESIC ಮಾರ್ಗಸೂಚಿಗಳನ್ವಯ “ಸೊಸೈಟಿ ನೋಂದಣಿ ಕಾಯ್ದೆ 1860” ಅಡಿಯಲ್ಲಿ ನೋಂದಾಯಿಸಿ “ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿ” ಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಇಲಾಖೆಯನ್ನು ESIC ಮಾರ್ಗಸೂಚಿಗಳನುಸಾರ “Karnataka Employees State Insurance Society” ಅನ್ನು “Society Registration Act 1860” ರಡಿ ನೊಂದಾಯಿಸಿ, ಅನುಬಂಧ-1 ರಲ್ಲಿರುವಂತೆ Memorandum of Asociation (MOA) ಮಾಡಿಕೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಬೀದರ್‌ಗೆ ಕ್ಯಾನ್ಸರ್ ಆಸ್ಪತ್ರೆ
“ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಈ ಸಂಸ್ಥೆಯ ಮೇಲ್ವಿಚಾರಣೆಯೊಂದಿಗೆ 100 ಹಾಸಿಗೆಗಳ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವ ಸಂಬಂಧ, ಸಿವಿಲ್ ಕಾಮಗಾರಿಯ ಅಂದಾಜು ವೆಚ್ಚ ರೂ.36.00 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಹಾಗೂ ಸದರಿ ಅಂದಾಜು ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಭರಿಸಲು; ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಬೀದರ್‌ನಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವುದರಿಂದ ಸುತ್ತಮುತ್ತಲಿನ ಜಿಲ್ಲೆಗಳ ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ನೀಡಲು ಸಹಕಾರಿಯಾಗುತ್ತದೆ ಎಂದು ಪ್ರಸ್ತಾಪಿಸಲಾಗಿತ್ತು.
ಅಂತರ್ಜಲ ನಿರ್ವಹಣೆಗೆ ವಿಧೇಯಕ
“ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ-2025ಕ್ಕೆ ಅನುಮೋದನೆ; ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಲು; ಸಚಿವ ಸಂಪುಟವು ಒಪ್ಪಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಕೇಂದ್ರಿಯ ಅಂತರ್ಜಲ ಪ್ರಾಧಿಕಾರ, ನವದೆಹಲಿ ಇವರು ಅಂತರ್ಜಲ ನಿರ್ವಹಣೆ ಕುರಿತಾಗಿ ದಿನಾಂಕ: 24.09.2020 ಮತ್ತು ದಿನಾಂಕ: 29.03.2023 ರಂದು ವಾಣಿಜ್ಯ, ಕೈಗಾರಿಕೆ, ಮೂಲಸೌಕರ್ಯ, ಗಣಿಗಾರಿಕೆ,Bulk Water Supply (ಟ್ಯಾಂಕರ್ ನೀರು ಸರಬರಾಜು) ಮತ್ತು ಇತರೆ ಉದ್ದೇಶಗಳಿಗೆ ಅಂತರ್ಜಲ ಬಳಸಲು ನಿರಾಕ್ಷೇಪಣಾ ಪತ್ರ ನೀಡುವ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ರಾಜ್ಯಕ್ಕೆ ಅಳವಡಿಸಿಕೊಂಡು ಜಾರಿಗೊಳಿಸಲು ಸಹಕಾರಿಯಾಗುತ್ತದೆ. ಈ ಉದ್ದೇಶದಿಂದ ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು.
ವರದಾ ನದಿಗೆ ನೀರು ತುಂಬಿಸುವ ಯೋಜನೆ
ಹಾವೇರಿ ಜಿಲ್ಲೆ, ಹಾನಗಲ್ಲ ತಾಲ್ಲೂಕಿನ ವರದಾ ನದಿಯಿಂದ ನೆರೆಗಲ್ ಹಾಗೂ ಕುಸನೂರ ಏತ ನೀರಾವರಿ ಮುಖಾಂತರ 111 ಕೆರೆಗಳನ್ನು ತುಂಬಿಸುವ ಯೋಜನೆಯನ್ನು ರೂ.220.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ವ್ಯಾಪ್ತಿಯಲ್ಲಿನ ಬಹುತೇಕ ಕೆರೆಗಳಲ್ಲಿ ಕಳೆದ 05 ವರ್ಷಗಳಲ್ಲಿ ಮಳೆಯ ಅಭಾವದಿಂದ ನೀರಿನ ಸಂಗ್ರಹಣೆ ಸಮರ್ಪಕವಾಗಿರುವುದಿಲ್ಲ. ಇದರಿಂದಾಗಿ ಈ ಭಾಗದ ರೈತರುಗಳಿಗೆ ವ್ಯವಸಾಯ ಮಾಡಲು ಮತ್ತು ನೀರಾವರಿಗಾಗಿ ತುಂಬಾ ಅನಾನುಕೂಳವಾಗಿರುತ್ತದೆ ಹಾಗೂ ಅಂತರ್ಜಲ ಮಟ್ಟ ಕಡಿಮೆಯಾಗಿ, ಕೊಳವೆ ಬಾವಿಗಳಲ್ಲಿ ಸಮರ್ಪಕವಾಗಿ ನೀರು ಸಿಗದೆ ಸಾರ್ವಜನಿಕರಿಗೆ, ಜನಜಾನುವಾರುಗಳಿಗೆ ಕುಡಿಯುವ ನೀರಿಗೂ ತುಂಬಾ ಅನಾನುಕೂಲವಾಗಿದ್ದು, ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ತುಂಬಿಸುವುದರಿAದ ಅಂತರ್ಜಲ ಅಭಿವೃದ್ಧಿಪಡಿಸಲು ಸಹಕಾರಿಯಾಗುತ್ತದೆ ಎಂದು ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು.
ಸೊಕನಾದಗಿ ನೀರಾವರಿ ಯೋಜನೆಗೆ ಅನುಮೋದನೆ
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಸೊಕನಾದಗಿ ಗ್ರಾಮ ಮತ್ತು ಸುತ್ತಮುತ್ತಲಿನ 588 ಹೆಕ್ಟೇರ್ ಕ್ಷೇತ್ರಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರಾವರಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ರೂ.17.00 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಬಾಗಲಕೋಟೆ ಜಿಲ್ಲೆ, ಬಾಗಲಕೋಟೆ ತಾಲ್ಲೂಕಿನ ಸೊಕನಾದಗಿ ಗ್ರಾಮದ ಹತ್ತಿರ ಏತ ನೀರಾವರಿ ಯೋಜನೆಯ ಮೂಲಕ ಕಾಮಗಾರಿ ಕೈಗೊಳ್ಳುವುದರಿಂದ ಸೊಕನಾದಗಿ, ಛಬ್ಬಿ, ತುಳಸಿಗೇರಿ, ದೇವನಾಳ ಗ್ರಾಮಗಳ ಸುಮಾರು 588 ಹೆಕ್ಟೇರ್ ಪ್ರದೇಶಕ್ಕೆ ಏತ ನೀರಾವರಿ ಮೂಲಕ ನೀರು ಒದಗಿಸುವುದರಿಂದ ರೈತರ ಪರಿಸ್ಥಿತಿ ಉತ್ತಮಗೊಳ್ಳುತ್ತದೆ ಎಂದು ಪ್ರಸ್ತಾಪಿಸಲಾಗಿತ್ತು.
ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗೆ ಹಾಸ್ಟೇಲ್
“ಪ್ರತಿ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ ರೂ.265.57 ಲಕ್ಷಗಳಂತೆ ಒಟ್ಟು 15 ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತ ರೂ.3983.55 ಲಕ್ಷಗಳ ಯೋಜನಾ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ರೂ.87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ರಾಜ್ಯದ 15 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ 15 ಮಹಿಳಾ ಕಾಲೇಜು ಕಟ್ಟಡಗಳ ನಿರ್ಮಾಣದ ರೂ.87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು. ಪ್ರತಿ ಕಾಲೇಜಿನ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ ರೂ.265.57 ಲಕ್ಷಗಳಂತೆ ಒಟ್ಟು 15 ಕಾಲೇಜುಗಳ ಕಟ್ಟಡ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಮೊತ್ತ ರೂ.39.83 ಕೋಟಿಗಳ ಯೋಜನಾ ವೆಚ್ಚಕ್ಕೆ ಅನುಮೋದನೆಗೆ ಮಂಡಿಸಲಾಗಿತ್ತು.
ಜಾಲಹಳ್ಳಿ ಹನುಮಂತ ದೇವಸ್ಥಾನಕ್ಕೆ ಜಮೀನು ವಿಸ್ತರಣೆ
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಜಾಲಹಳ್ಳಿ ಗ್ರಾಮದ ಸರ್ವೆ ನಂ.73 ರಲ್ಲಿರುವ ಹನುಮಂತ ದೇವರ ದೇವಾಲಯಕ್ಕೆ ಸೇರಿದ 1.32 ಎಕರೆ ಜಮೀನನ್ನು ಜಾಲಹಳ್ಳಿ ವಿದ್ಯಾ ಸಂಸ್ಥೆಯ ಮದರ್ ತೆರೆಸಾ ಶಾಲೆಗೆ ಮಕ್ಕಳ ಆಟದ ಮೈದಾನಕ್ಕೆ ದಿನಾಂಕ: 16.06.2005 ರಂದು 20 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಿದ್ದು, ಸದರಿ ಗುತ್ತಿಗೆ ಅವಧಿಯನ್ನು 30 ವರ್ಷಗಳ ಅವಧಿಗೆ ವಿಸ್ತರಿಸಲು ಅನುಮೋದನೆ ನೀಡಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಕಾಯ್ದೆ 1997 ರ ಸೆಕ್ಷನ್ 62 ಮತ್ತು 2002ರ ನಿಯಮಗಳು 30 ಮತ್ತು 31ರ ಅನುಸಾರ ದೇವಾಲಯದ ಭೂಮಿಯನ್ನು ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ಗುತ್ತಿಗೆ ನೀಡಲು ಅವಕಾಶವಿರುವುದರಿಂದ ಪ್ರಸ್ತಾವನೆಯನ್ನು ತಿರಸ್ಕರಿಸಲು; ಅಥವಾ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಅಧಿನಿಯಮ 1997ರ ಕಾಯ್ದೆ ಮತ್ತು 2002ರ ನಿಯಮಗಳಲ್ಲಿನ ಕಡ್ಡಾಯ ಸಾರ್ವಜನಿಕ ಹರಾಜು ಪ್ರಕ್ರಿಯೆಗೆ ವಿನಾಯಿತಿ ನೀಡಿ ಅನ್ವಯವಾಗುವ ಷರತ್ತುಗಳೊಂದಿಗೆ ಲೋಕೋಪಯೋಗಿ ಇಲಾಖೆಯು ನಿಗದಿಪಡಿಸಿರುವ ಮಾರುಕಟ್ಟೆ ದರ ಮಾಹೆಯಾನ ರೂ.29,75,525.00 ರಂತೆ 30 ವರ್ಷಗಳಿಗೆ ಜಮೀನನ್ನು ಜಾಲಹಳ್ಳಿ ವಿದ್ಯಾಸಂಸ್ಥೆಗೆ ಗುತ್ತಿಗೆ ನವೀಕರಿಸಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ತಲಕಾಡು ಇನ್ನು ಪಟ್ಟಣ ಪಂಚಾಯಿತಿ
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮ ಪಂಚಾಯಿತಿಯೊಂದಿಗೆ ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಟಿ.ಬೆಟ್ಟಹಳ್ಳಿ ಮತ್ತು ಕೂರುಬಾಳನಹುಂಡಿ ಗ್ರಾಮಗಳನ್ನು ಸೇರ್ಪಡೆಗೊಳಿಸಿ “ತಲಕಾಡು ಪಟ್ಟಣ ಪಂಚಾಯಿತಿ” ಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದಿಸಿದೆ.
ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 4, 9, 349, 350, 351 ಮತ್ತು 355 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮ ಪಂಚಾಯಿತಿಯೊAದಿಗೆ ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಟಿ.ಬೆಟ್ಟಹಳ್ಳಿ ಮತ್ತು ಕೂರುಬಾಳನಹುಂಡಿ ಗ್ರಾಮಗಳನ್ನು ಸೇರ್ಪಡೆಗೊಳಿಸಿ ಪಟ್ಟಣ ಪಂಚಾಯಿತಿಯನ್ನು ರಚಿಸಿ ತಲಕಾಡು ಪಟ್ಟಣ ಪಂಚಾಯಿತಿ ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಭಟ್ಕಳ ಪುರಸಭೆ ಇನ್ನು ನಗರಸಭೆ
ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷನ್-3, 9, 349, 355, 356, 357, 359 ಮತ್ತು 361 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಉತ್ತರ ಕನ್ನಡ ಜಿಲ್ಲೆಯ ಹಾಲಿ ಭಟ್ಕಳ ಪುರಸಭೆಯ ವ್ಯಾಪ್ತಿಗೆ ಜಾಲಿ ಪಟ್ಟಣ ಪಂಚಾಯಿತಿ ಮತ್ತು ಹೆಬಳೆ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಮಾಡಿ ನಗರಸಭೆಯನ್ನಾಗಿ ಪರಿವರ್ತಿಸಿ ಭಟ್ಕಳ ನಗರಸಭೆ ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾಪಿಸಲಾಗಿತ್ತು.
ಇಂಡಿ ಪುರಸಭೆ ಇನ್ನು ನಗರಸಭೆ
ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 9 ಮತ್ತು 361 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ವಿಜಯಪುರ ಜಿಲ್ಲೆಯ ಇಂಡಿ ಪುರಸಭೆಯನ್ನು ಮೇಲ್ದರ್ಜೆಗೇರಿಸಿ ಇಂಡಿ ನಗರಸಭೆ ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ವಿಜಯಪುರ ಜಿಲ್ಲೆಯ ಇಂಡಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾಪಿಸಲಾಗಿತ್ತು.
ಕೈವಾರ ಮತ್ತು ಮಸ್ತೇನಹಳ್ಳಿ ಇನ್ನು ಪಟ್ಟಣ ಪಂಚಾಯಿತಿ
ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 4, 9, 349, 350, 351 ಮತ್ತು 355 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೈವಾರ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ, ಮೇಲ್ದರ್ಜೆಗೇರಿಸಿ “ಕೈವಾರ ಪಟ್ಟಣ ಪಂಚಾಯಿತಿ” ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೈವಾರ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ “ಕೈವಾರ ಪಟ್ಟಣ ಪಂಚಾಯಿತಿ”ಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾಪಿಸಲಾಗಿತ್ತು.
ಪಾಂಡವಪುರ ಬಾಕಿ ಕಾಮಗಾರಿ ಅನುಷ್ಠಾನ
ಪಾಂಡವಪುರ ಪಟ್ಟಣದ ಒಳಚರಂಡಿ ಯೋಜನೆಯಡಿ ಬಿಟ್ಟು ಹೋದ ಒಳಚರಂಡಿ ಕೊಳವೆ ಮಾರ್ಗ, ಹೊರ ಹರಿವು ಒಳಚರಂಡಿ ಮಾರ್ಗ ಮತ್ತು ಗೃಹ ಸಂಪರ್ಕ ಕಲ್ಪಿಸುವ ಬಾಕಿ ಉಳಿದ ಕಾಮಗಾರಿಗಳನ್ನು ರೂ.11.62 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಪಟ್ಟಣದಲ್ಲಿ 2011ರಲ್ಲಿ ಒಳಚರಂಡಿ ಕೊಳವೆ ಮಾರ್ಗವನ್ನು ಅಳವಡಿಸಲಾಗಿದ್ದು, ಕೆಲವು ಸ್ಥಳಗಳಲ್ಲಿ ಹೊಸದಾಗಿ ಒಳಚರಂಡಿ ಕೊಳವೆ ಮಾರ್ಗ ಅಳವಡಿಸಬೇಕಾಗಿರುತ್ತದೆ. ಹಾರೋಹಳ್ಳಿ ಪ್ರದೇಶದಲ್ಲಿ ಒಂದು ತೇವ ಬಾವಿ ನಿರ್ಮಿಸಬೇಕಾಗಿದ್ದು, ಈಗಾಗಲೇ ನಿರ್ಮಿಸಿರುವ 02 ತೇವ ಬಾವಿಗಳಿಗೆ ಪಂಪ್‌ಸೆಟ್, ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಮತ್ತು ಒಳಚರಂಡಿ ಗೃಹ ಸಂಪರ್ಕಗಳನ್ನು ಸಹ ಒದಗಿಸಬೇಕಾಗಿರುತ್ತದೆ. ಈಗಾಗಲೇ ಸ್ವಚ್ಛ ಭಾರತ್ ಮಿಷನ್ (ನಗರ) 2.0 ರಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಲು ಕ್ರಮವಹಿಸುತ್ತಿರುವುದರಿಂದ ಸದರಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ತ್ಯಾಜ್ಯ ನೀರು ತಲುಪಲು ಹಾಗೂ ನೈರ್ಮಲ್ಯವನ್ನು ಕಾಪಾಡಲು ಪ್ರಸ್ತಾಪಿತ ಬಾಕಿ ಕಾಮಗಾರಿಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಪ್ರಸ್ತಾಪಿಸಲಾಗಿತ್ತು.
ಶಿವ ಸಮತೋಲನ ಜಲಾಶಯ ಯೋಜನೆ ವಿಸ್ತರಣೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಂದ ಶಿವ ಸಮತೋಲನ ಜಲಾಶಯದಿಂದ ಶಿವ ಸಮತೋಲನ ಜಲಾಶಯದ ಕೊಳವೆ ಮಾರ್ಗಗಳ ಇಂಟೇಕ್ ಬಳಿ ಇರುವ 5ನೇ ಹಂತದ ಕಚ್ಚಾ ನೀರು ಸರಬರಾಜು ಕೊಳವೆ ಮಾರ್ಗದವರೆಗೆ 3200 ಮಿ.ಮೀ ವ್ಯಾಸದ ವಿಸ್ತರಿತ ಹೆಚ್ಚುವರಿ ಕಚ್ಚಾ ನೀರಿನ ಕೊಳವೆ ಮಾರ್ಗವನ್ನು ಅಳವಡಿಸುವ ರೂ.136.50 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಕೆ.ಟಿ.ಪಿ.ಪಿ ಕಾಯ್ದೆ 1999 ರನ್ವಯ ಅನುಷ್ಟಾನಗೊಳಿಸುವ ಷರತ್ತಿಗೊಳಪಟ್ಟು ಕಾಮಗಾರಿಯ ವಿಸ್ತೃತ ಯೋಜನಾ ವರದಿಗೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಶಿವ ಸಮತೋಲನ ಜಲಾಶಯದಿಂದ ಶಿವ ಸಮತೋಲನ ಜಲಾಶಯದ ಕೊಳವೆ ಮಾರ್ಗಗಳ ಇಂಟೇಕ್ ಬಳಿ ಇರುವ 5ನೇ ಹಂತದ ಕಚ್ಚಾ ನೀರು ಸರಬರಾಜು ಕೊಳವೆ ಮಾರ್ಗದವರೆಗೆ 3200 ಮಿ.ಮೀ ವ್ಯಾಸದ ವಿಸ್ತರಿತ ಹೆಚ್ಚುವರಿ ಕಚ್ಚಾ ನೀರಿನ ಕೊಳವೆ ಮಾರ್ಗವನ್ನು ಅಳವಡಿಸುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು.
ಕೋಲಾರ ಕುರುಬರ ಸಂಘಕ್ಕೆ ಗುತ್ತಿಗೆ ಆಧಾರದ ಮೇಲೆ ಜಮೀನು
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಕಾಳಸ್ತಿಪುರ ಗ್ರಾಮದ ಸ.ನಂ.196/3, 221/1, 221/2 ಇತ್ಯಾದಿ ಸ.ನಂಬರ್‌ಗಳಲ್ಲಿ ಒಟ್ಟು 29ಎ-30ಗು ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ವಸತಿ ಬಡಾವಣೆಯಲ್ಲಿನ 4017.37 ಚ.ಮೀ ವಿಸ್ತೀರ್ಣದ ನಾಗರೀಕ ಸೌಲಭ್ಯ ನಿವೇಶನವನ್ನು ರೂ.3,21,38,960/- ಗಳ ಒಟ್ಟು ಮೌಲ್ಯಕ್ಕೆ ಶೇ.10 ರಷ್ಟು ದರ ವಿಧಿಸಿ ಜಿಲ್ಲಾ ಕುರುಬರ ಸಂಘ, ಕೋಲಾರ ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಜಿಲ್ಲಾ ಕುರುಬರ ಸಂಘ, ಕೋಲಾರ ಇವರಿಗೆ ವಿದ್ಯಾರ್ಥಿನಿಲಯ ನಿರ್ಮಾಣಕ್ಕಾಗಿ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾಳಸ್ತಿಪುರ ಗ್ರಾಮದ ವಸತಿ ಬಡಾವಣೆಯಲ್ಲಿ 4017.37 ಚ.ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ಗುತ್ತಿಗೆ ಆಧಾರದ ಮೇಲೆ ನೀಡಲು ಪ್ರಸ್ತಾಪಿಸಲಾಗಿತ್ತು.
ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ ಇನ್ನು ಆಯುಕ್ತಾಲಯ
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ರಚನೆ, ಆಯುಕ್ರ ನೇಮಕಾತಿ ಹಾಗೂ ಅಧಿಕಾರ ಮತ್ತು ಕರ್ತವ್ಯಗಳಿಗೆ ಸಂಬAಧಿಸಿದAತೆ ಶಾಸನಬದ್ಧ ಅವಕಾಶವನ್ನು ಕಲ್ಪಿಸಲು ಹಾಗೂ ಆಯುಕ್ತಾಲಯ ರಚನೆಯಿಂದ ನಗರಾಭಿವೃದ್ಧಿ ಪ್ರಾಧಿಕಾರಗಳ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿಯಂತ್ರಣವನ್ನು ಆಯುಕ್ತಾಲಯದ ವ್ಯಾಪ್ತಿಗೆ ಒಳಪಡಿಸಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ಕ್ಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಗಳಲ್ಲಿ ತಿದ್ದುಪಡಿ ತರುವುದು ಅವಶ್ಯಕವಿರುವುದರಿಂದ ಈ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಗದಗ-ಬೆಟಗೇರಿ ಅಧ್ಯಾದೇಶ ಬದಲಿಗೆ ವಿಧೇಯಕ
ಅಧ್ಯಾದೇಶವನ್ನು ಬದಲಿ ವಿಧೇಯಕವನ್ನಾಗಿ ವಿದಾಯಿಸುವ ಪ್ರಕ್ರಿಯೆ ಜೊತೆಗೆ ಅಧ್ಯಾದೇಶದಲ್ಲಿ ಒಳಗೊಂಡಿರದ ಇಬ್ಬರು ಹೆಚ್ಚುವರಿ ಸದಸ್ಯರನ್ನು ಸಹ ಕಾಯ್ದೆಗೆ ಸೇರ್ಪಡೆಗೊಳಿಸಿ ಸಿದ್ದಪಡಿಸಿರುವ ಪರಿಷ್ಕೃತ ಗದಗ-ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ (ಅನುಬಂಧದಲ್ಲಿರುವAತೆ); ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಮಾನ್ಯ ರಾಜ್ಯಪಾಲರು ನಿರ್ದೇಶಿಸಿದ ಹಿನ್ನೆಲೆಯಲ್ಲಿ Gadag-Betageri Business Culture and Exhibition Authority (Amendment) Ordinance, 2025 (Karnataka Ordinance 3 of 2025) ಅನ್ನು ಪ್ರಖ್ಯಾಪಿಸಲಾಗಿದ್ದು, ಭಾರತ ಸಂವಿಧಾನದ ಅನುಚ್ಛೇದ 213 ರನ್ವಯ ಸದರಿ ಅಧ್ಯಾದೇಶವು ಬದಲಿ ವಿಧೇಯಕವಾಗಿ ವಿದಾಯಿಗೊಳ್ಳಬೇಕಾಗು ವುದರಿಂದ ಈ ಪ್ರಸ್ತಾವನೆ ಮಂಡಿಸಲಾಗಿತ್ತು.
ಹುಣಸೂರು ನಾಲೆಗಳ ಆಧುನೀಕರಣ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗಳ ರೂ.49.85 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು.
ಮರೂರು ಶಾಖಾ ನಾಲೆ ಆಧುನೀಕರಣ
ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿಯ (Modernization of Marur Branch Canal and its distributaries unde