Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಾಂತಿ ಕಾಪಾಡಲು ₹10,000 ಬಾಂಡ್‌ಗೆ ಸಹಿ ಹಾಕುವಂತೆ ನೆಹಾ ಬೋರಾಗೆ ಕೋರ್ಟ್ ಸೂಚನೆ!

Spread the love

ನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಹೋರಾಟಗಾರ್ತಿ ನೆಹಾ ಬೋರಾ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

ದೆಹಲಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ವಜಾಗೊಳಿಸಿದೆ. ವಿಚಾರಣೆ ವೇಳೆ ಶಾಂತಿ ಕಾಪಾಡುವುದಾಗಿ ಭರವಸೆ ನೀಡುವ 10,000 ರೂ. ವೈಯಕ್ತಿಕ ಬಾಂಡ್‌ಗೆ ಸಹಿ ಹಾಕುವಂತೆಯೂ ಹಾಗೂ ಒಬ್ಬ ಜಾಮೀನುದಾರರನ್ನ ಒದಗಿಸುವಂತೆ ಕೋರ್ಟ್‌ ಸೂಚಿಸಿದೆ ಎಂದು ವರದಿಯಾಗಿದೆ.

ಏನಿದು ಪ್ರಕರಣ?
ಅಕ್ಟೋಬರ್ 16ರಂದು ನಡೆದ ‘ಲೆಹ್ರಾ ದೋ ತಿರಂಗಾ’ (Lehra Do Tiranga) ಯಾತ್ರೆಯಲ್ಲಿ ನೇಹಾ ಬೋರಾ ಭಾಗವಹಿಸಿದರು. ಬಳಿಕ ದೆಹಲಿ ಪೊಲೀಸರು ಅವರನ್ನ ವಶಕ್ಕೆ ಪಡೆದು, ಬಿಡುಗಡೆ ಮಾಡಿದ್ದರು. ಬಳಿಕ ನೋಟಿಸ್ ಜಾರಿಗೊಳಿಸಿದ್ದರು. ಆದ್ರೆ ನೇಹಾ ಬೋರಾ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಹೊರಡಿಸಿದ್ದ ಮುನ್ನೆಚ್ಚರಿಕಾ ನೋಟಿಸ್ ಅನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಕ್ರಮವು ನಮ್ಮ ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟುಮಾಡುತ್ತದೆ. ಆದ್ದರಿಂದ ಸಂಬಂಧಿತ ವಿಚಾರಣಾ ಪ್ರಕ್ರಿಯೆಯನ್ನ ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಈ ಪ್ರಕರಣದ ಆದೇಶವನ್ನ ನ್ಯಾಯಾಲಯ ಗುರುವಾರ ಕಾಯ್ದಿರಿಸಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ನೆಹಾ ಬೋರಾ ಅವರು ಬಾಂಡ್‌ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ನಿರ್ದೇಶನ ನೀಡಿದೆ.


Spread the love
Share:

administrator

Leave a Reply

Your email address will not be published. Required fields are marked *