ಮಧುರೈ-ಚೆನ್ನೈ ಇಂಡಿಗೋ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು;

ಚೆನ್ನೈ: ಚೆನ್ನೈನಲ್ಲಿ ಇಂಡಿಗೋ ವಿಮಾನ ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಪೈಲಟ್ ಬಿರುಕು ಗಮನಿಸಿದ ತಕ್ಷಣ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ಎಚ್ಚರಿಕೆ ನೀಡಿದರು.

ಸುರಕ್ಷತಾ ಪ್ರೋಟೋಕಾಲ್‌ಗಳನ್ನು ತ್ವರಿತವಾಗಿ ಪ್ರಾರಂಭಿಸಲಾಯಿತು, ಸುರಕ್ಷಿತ ಲ್ಯಾಂಡಿಂಗ್ ಮಾಡಲಾಗಿದೆ. ಮಧುರೈನಿಂದ ಆಗಮಿಸುತ್ತಿದ್ದ ಇಂಡಿಗೋ ವಿಮಾನದ ಮುಂಭಾಗದ ವಿಂಡ್ ಷೀಲ್ಡ್ ನಲ್ಲಿ ಬಿರುಕು ಕಂಡುಬಂದಿದೆ. ಯಾವುದೇ ತೊಂದರೆಯಿಲ್ಲದೆ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಲ್ಯಾಂಡಿಂಗ್ ನಂತರ, ವಿಮಾನವನ್ನು ಬೇ ನಂ. 95 ಕ್ಕೆ ಸ್ಥಳಾಂತರಿಸಲಾಯಿತು, ಅಲ್ಲಿ ತಾಂತ್ರಿಕ ತಂಡಗಳು ಹಾನಿಗೊಳಗಾದ ಗಾಜು ಬದಲಾಯಿಸಲು ಸಿದ್ಧತೆಗಳನ್ನು ಪ್ರಾರಂಭಿಸಿದವು. ಬಿರುಕಿಗೆ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.
ಸುರಕ್ಷತಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಒತ್ತಿ ಹೇಳಿದರು.ಹಬ್ಬದ ಸೀಸನ್ಗೂ ಮುಂಚಿತವಾಗಿ ವಿಮಾನದ ಸುರಕ್ಷತೆ, ಕಾರ್ಯಾಚರಣೆ ಕುರಿತು ಮಾಹಿತಿ ಪಡೆಯಲು ನಾಯ್ಡು ತೆರಳಿದ್ದರು.
ಮತ್ತೊಂದು ಘಟನೆ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನ ಸುರಕ್ಷಿತವಾಗಿ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು . ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.
ಹಕ್ಕಿ ಡಿಕ್ಕಿ ಹೊಡೆದ ವಿಮಾನವು ದೆಹಲಿಯಿಂದ ಗೋವಾಕ್ಕೆ ಹಾರಾಟ ನಡೆಸಲು ನಿರ್ಧರಿಸಲಾಗಿತ್ತು. ಮೂಲಗಳ ಪ್ರಕಾರ, ಈ ಮಾರ್ಗಕ್ಕೆ ಮತ್ತೊಂದು ವಿಮಾನವನ್ನು ನಿಯೋಜಿಸಲಾಗಿದ್ದರಿಂದ ಈ ಸೇವೆ ಕೆಲವು ಗಂಟೆಗಳ ಕಾಲ ವಿಳಂಬವಾಯಿತು.
ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಸಂಖ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.