Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮ ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್: ಆರ್‌ಎಂವಿ 2ನೇ ಹಂತದ 11 ಕಟ್ಟಡಗಳಿಗೆ ಬೀಗ

Spread the love

ಬೆಂಗಳೂರು: ವಸತಿ ಪ್ರದೇಶಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸ್ಥಳಗಳ ಒತ್ತುವರಿ ವಿರುದ್ಧ ನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಒಂದೆಡೆ, ಆರ್‌ಎಂವಿ 2ನೇ ಹಂತದಲ್ಲಿ ಅಗತ್ಯ ಅನುಮತಿ ಇಲ್ಲದೆ ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದ 11 ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಮತ್ತೊಂದೆಡೆ, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಅನಧಿಕೃತ ವ್ಯಾಪಾರಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ಗೋವಿಂದಪುರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಸುರಕ್ಷಿತ ಸಂಚಾರ ಹಾಗೂ ನಗರದಲ್ಲಿ ಸುಗಮ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ. ಆರ್‌ಎಂವಿ 2ನೇ ಹಂತದಲ್ಲಿ 11 ಕಟ್ಟಡಗಳಿಗೆ ಬೀಗ! ವಸತಿ ಕಟ್ಟಡಗಳಲ್ಲಿ ಅಗತ್ಯ ಅನುಮತಿ ಪಡೆಯದೆ ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದ ಸಂಸ್ಥೆಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ಜಂಟಿ ಕಾರ್ಯಾಚರಣೆ ನಡೆಸಿದೆ. ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ಹಾಗೂ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.ಒಟ್ಟು 21 ವಾಣಿಜ್ಯ ಸಂಸ್ಥೆಗಳನ್ನು ಗುರುತಿಸಲಾಗಿತ್ತು. ಈ ಪೈಕಿ ಇಂದು 11 ಸಂಸ್ಥೆಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಉಳಿದ 10 ಸಂಸ್ಥೆಗಳ ವಿರುದ್ಧವೂ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚುತ್ತಿರುವುದು ಹಲವು ಬಡಾವಣೆಗಳ ನಿವಾಸಿಗಳಿಗೆ ಸಮಸ್ಯೆಯಾಗಿದೆ. ಮನೆಗಳಿರುವ ಪ್ರದೇಶಗಳಲ್ಲಿ ಅನುಮತಿಯಿಲ್ಲದೆ ಅಂಗಡಿ, ಕಚೇರಿ ಹಾಗೂ ಇತರ ವಾಣಿಜ್ಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಹೀಗಾಗಿ ನಗರದ ಇತರ ವಸತಿ ಬಡಾವಣೆಗಳಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಒತ್ತುವರಿ ತೆರವು ಇನ್ನು ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲೂ ಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳಿಸಿದೆ. ಹಳದಿ ಗೆರೆ ದಾಟಿ ವ್ಯಾಪಾರ ನಡೆಸುವ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಕಾಂಪ್ಲೆಕ್ಸ್‌ನ ಗೇಟ್ ಹಾಗೂ ಕಾರಿಡಾರ್‌ಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗುವ ವಸ್ತುಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಕಳೆದ 10ರಿಂದ 15 ದಿನಗಳಿಂದ ನಿರಂತರವಾಗಿ ಜಾಗೃತಿ ಮೂಡಿಸಿದರೂ ವ್ಯಾಪಾರಿಗಳು ನಿಯಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂದಿನಿಂದ ಕಾಂಪ್ಲೆಕ್ಸ್‌ನಲ್ಲಿ ಮಾರ್ಷಲ್‌ಗಳನ್ನು ನಿಯೋಜಿಸಲು ಆದೇಶಿಸಲಾಗಿದೆ. ನಿಗದಿತ ಸ್ಥಳ ಮೀರಿ ವ್ಯಾಪಾರ ನಡೆಸುವವರಿಗೆ ದಂಡ ವಿಧಿಸಲಾಗುತ್ತದೆ. ಅನಧಿಕೃತ ಜಾಹೀರಾತು ಫಲಕಗಳು ಹಾಗೂ ಗೋದಾಮು ಮಳಿಗೆಗಳ ಪರಿಶೀಲನೆಯನ್ನೂ ನಡೆಸಲಾಗುತ್ತದೆ. ಗೋವಿಂದಪುರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಇನ್ನೊಂದೆಡೆ, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಗೋವಿಂದಪುರದಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪಾದಚಾರಿಗಳು ಸುರಕ್ಷಿತವಾಗಿ ಹಾಗೂ ಯಾವುದೇ ಅಡೆತಡೆಯಿಲ್ಲದೆ ಸಂಚರಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ಸುಗಮ ವ್ಯವಸ್ಥೆ ಕಲ್ಪಿಸುವುದು ಹಾಗೂ ಫುಟ್‌ಪಾತ್‌ಗಳ ಬಳಕೆಯನ್ನು ಸಾರ್ವಜನಿಕರಿಗೆ ಮರಳಿ ಒದಗಿಸುವುದು ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕ ಸ್ಥಳಗಳ ಲಭ್ಯತೆಯನ್ನು ಸುಧಾರಿಸಲು ಪಾಲಿಕೆ ಈ ಕ್ರಮ ಕೈಗೊಂಡಿದೆ.


Spread the love
Share:

administrator

Leave a Reply

Your email address will not be published. Required fields are marked *