ಸರ್ಕಾರಕ್ಕೆ ‘ಕ್ರೆಡಲ್’ ಭರ್ಜರಿ ಲಾಭಾಂಶ: ಸಿಎಂ ಸಿದ್ದರಾಮಯ್ಯ ಅವರಿಗೆ 77 ಕೋಟಿ ರೂ. ಚೆಕ್ ಹಸ್ತಾಂತರ!

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ (KREDL) ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ. ಅನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಗುರುವಾರ ಸಲ್ಲಿಸಿದರು.


ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್ ಕಚೇರಿಯಲ್ಲಿ ಸ್ವೀಕರಿಸಿದರು.

ಇದೇ ವೇಳೆ ಕ್ರೆಡಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ.ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.