Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುಷ್ಪರಾಜ್ ನೋಡಲು ಮುಗಿಬಿದ್ದ ಅಭಿಮಾನಿಗಳ ದಂಡು: ಐಕಾನ್ ಸ್ಟಾರ್ ನಿವಾಸದ ಮುಂದೆ ಹೈಡ್ರಾಮಾ

Spread the love

ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಇಂದು (ಏಪ್ರಿಲ್ 8) 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಂಗಳವಾರ (ಏಪ್ರಿಲ್ 7) ರಾತ್ರಿಯಿಂದಲೇ ದೇಶದ ವಿವಿಧ ಮೂಲೆಗಳಿಂದ ಬಂದ ಸಾವಿರಾರು ಅಭಿಮಾನಿಗಳು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ನಟನ ನಿವಾಸದ ಮುಂದೆ ಜಮಾಯಿಸಿದ್ದರು. ಈ ವೇಳೆ ಜನದಟ್ಟಣೆ ಮಿತಿಮೀರಿದ ಕಾರಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ (Lathi Charge) ನಡೆಸಬೇಕಾಯಿತು. ಸೋಶಿಯಲ್ ಮೀಡಿಯಾದಲ್ಲಿ ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಲು ಮಂಗಳವಾರ ರಾತ್ರಿಯೇ ಅಭಿಮಾನಿಗಳು ಫಲಕ ಮತ್ತು ಉಡುಗೊರೆಗಳೊಂದಿಗೆ ಸಾಲುಗಟ್ಟಿ ನಿಂತಿದ್ದರು. ಅಭಿಮಾನಿಗಳ ಕೂಗಾಟ ಮತ್ತು ನೂಕುನುಗ್ಗಲು ಹೆಚ್ಚಾದಾಗ, ಅಲ್ಲು ಅರ್ಜುನ್ ಅವರ ಖಾಸಗಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸ ಪಡಬೇಕಾಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಬುಧವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರು ತಮ್ಮ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ದರ್ಶನ ನೀಡಿದರು. ಈ ವೇಳೆ ಅಭಿಮಾನಿಯೊಬ್ಬರು ‘ಪುಷ್ಪ 2: ದಿ ರೂಲ್’ ಸಿನಿಮಾದ ಜಾತ್ರೆ ಗೆಟಪ್‌ನಲ್ಲಿ ಬಂದು ಎಲ್ಲರ ಗಮನ ಸೆಳೆದರು. ಅಭಿಮಾನಿಗಳ ಪ್ರೀತಿಗೆ ಮನಸೋತ ಅಲ್ಲು ಅರ್ಜುನ್, ಕಾಂಪೌಂಡ್ ಗೋಡೆಯ ಮೇಲೆ ನಿಂತು ಕೈ ಮುಗಿದು ಎಲ್ಲರಿಗೂ ಧನ್ಯವಾದ ತಿಳಿಸಿದರು. ಅಷ್ಟೇ ಅಲ್ಲದೆ, ಹತ್ತಿರಕ್ಕೆ ಬಂದು ಅಭಿಮಾನಿಗಳ ಕೈ ಮುಟ್ಟಿ ಸಂಭ್ರಮ ಹಂಚಿಕೊಂಡರು.‘ನಿಮ್ಮ ಪ್ರೀತಿ ಮತ್ತು ಹಾರೈಕೆಗಳಿಗೆ ನಾನು ಸದಾ ಋಣಿ. ಇಷ್ಟು ದೂರದಿಂದ ಬಂದು ನನಗೆ ಶುಭ ಕೋರುತ್ತಿರುವುದಕ್ಕೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್ ಅವರು ಅಭಿಮಾನಿಗಳ ಪ್ರೀತಿಗೆ ಪ್ರತಿಕ್ರಿಯಿಸಿದ್ದಾರೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲಿ ಮತ್ತು ವಿದೇಶದಲ್ಲಿ ಕೂಡ ಅಲ್ಲು ಅರ್ಜುನ್ ಅವರಿಗೆ ಅಭಿಮಾನಿಗಳು ಇದ್ದಾರೆ.ಅಲ್ಲು ಅರ್ಜುನ್ ಅವರು ಈಗ ನಿರ್ದೇಶಕ ಅಟ್ಲಿ ಜೊತೆಗಿನ ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ‘ರಾಕಾ’ ಎಂದು ಶೀರ್ಷಿಕೆ ಇಡಲಾಗಿದೆ. ಅಲ್ಲು ಅರ್ಜುನ್ ಅವರ ಲುಕ್ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.


Spread the love
Share:

administrator

Leave a Reply

Your email address will not be published. Required fields are marked *