ದಾಂಡೇಲಿ: ಮರಕ್ಕೆ ಡಿಕ್ಕಿ ಹೊಡೆದ ವೇಗದ ಕಾರು; ಇಬ್ಬರ ದಾರುಣ ಸಾ*ವು, ಚಾಲಕನ ಸ್ಥಿತಿ ಗಂಭೀರ

ಕಾರವಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್–ಅಜಗಾಂವ ಬಳಿ ಮಂಗಳವಾರ ಸಂಭವಿಸಿದೆ.

ಧಾರವಾಡ ಮೂಲದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ಎರಡು ಮರಗಳ ಮಧ್ಯೆ ಸಿಲುಕಿಕೊಂಡಿದ್ದು, ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ದಾಂಡೇಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.