ದಾವಣಗೆರೆ: ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವತಿ; ವಿಡಿಯೋ ವೈರಲ್

ದಾವಣಗೆರ: ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ನಡೆದಿದೆ.

ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ ತಪಾಸಣೆ ಮಾಡುತ್ತಿದ್ದ ಪೊಲೀಸರು, ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ.
ಆರೋಪಿಯು ದಾವಣಗೆರೆಯ ಪ್ರತಿಷ್ಠಿತ ವ್ಯಕ್ತಿಯ ಪುತ್ರಿ ಎಂದು ಹೇಳಲಾಗಿದ್ದು, ಸದ್ಯ ಆಕೆಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.