Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಪಾತಕಿ ರಿಜ್ವಾನ್ ಎನ್‌ಕೌಂಟರ್‌ಗೆ ಬಲಿ: ಪೊಲೀಸರ ಗುಂಡಿಗೆ ಉಡೀಸ್!

Spread the love

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಡಿ-ಕಂಪನಿ (D-Company) ಜೊತೆ ನಂಟು ಹೊಂದಿದ್ದ ಗ್ಯಾಂಗ್‌ಸ್ಟರ್ ನಸೀಮ್ ದುರಾನಿ ಅಲಿಯಾಸ್ ರಿಜ್ವಾನ್, ಗುರುವಾರ ತಡರಾತ್ರಿ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದ ಜಂಟಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ.ನವೆಂಬರ್ 16 ರಂದು ಈಶಾನ್ಯ ದೆಹಲಿಯ ಕಾನೂನು ಸಚಿವ ಕಪಿಲ್ ಮಿಶ್ರಾ ಅವರ ಕಚೇರಿಯ ಬಳಿ ನಡೆದ 26 ವರ್ಷದ ಸಮೀರ್ ಎಂಬ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ದುರಾನಿ ಪ್ರಮುಖ ಆರೋಪಿಯಾಗಿದ್ದ.ಘಟನೆಯ ದಿನ ದುರಾನಿ ಸುಮಾರು 20 ಸುತ್ತು ಗುಂಡು ಹಾರಿಸಿ ಸಮೀರ್‌ನನ್ನು ಹತ್ಯೆಗೈದು ಪರಾರಿಯಾಗಿದ್ದ. ಆರೋಪಿಯ ಪತ್ತೆಗಾಗಿ ದೆಹಲಿ ಪೊಲೀಸರು ₹50,000 ಬಹುಮಾನವನ್ನೂ ಘೋಷಿಸಿದ್ದರು.ಖಚಿತ ಮಾಹಿತಿಯ ಮೇರೆಗೆ ದೆಹಲಿ ಪೊಲೀಸ್ ಮತ್ತು ನೋಯ್ಡಾ ವಿಶೇಷ ಕಾರ್ಯಪಡೆ (STF) ಜಂಟಿ ಕಾರ್ಯಾಚರಣೆ ನಡೆಸಿ ಬುಲಂದ್‌ಶಹರ್‌ನಲ್ಲಿ ದುರಾನಿಯನ್ನು ಸುತ್ತುವರಿದಿತ್ತು.ಶರಣಾಗುವಂತೆ ಸೂಚಿಸಿದಾಗ ಆತ ಪೊಲೀಸರತ್ತ ಗುಂಡು ಹಾರಿಸಿದ್ದು, ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ದುರಾನಿ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.ಕೊಲೆ ಹಾಗೂ ಕೊಲೆ ಯತ್ನ, ದರೋಡೆ ಸೇರಿದಂತೆ 20 ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದ ದುರಾನಿ, ಡಿ-ಕಂಪನಿಯ ಛೋಟಾ ಶಕೀಲ್ ಜೊತೆ ನೇರ ಸಂಪರ್ಕದಲ್ಲಿದ್ದನು. ಅಲ್ಲದೆ, ಈ ಹಿಂದೆ ಛೋಟಾ ರಾಜನ್ ಹತ್ಯೆ ಸಂಚಿನಲ್ಲೂ ಈತ ಭಾಗಿಯಾಗಿದ್ದ ಎನ್ನಲಾಗಿದೆ.ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಗ್ಯಾಂಗ್ ವಾರ್ ಹಿನ್ನೆಲೆಯಲ್ಲಿ ಸಮೀರ್ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.ಇನ್ನು ಹತ್ಯೆ ಸಮೀರ್ ಕೂಡ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಆತನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *