Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮ ಸಂಬಂಧ ಬಯಲು ಮಾಡಿದ್ದಕ್ಕೆ ಮಾರಣಾಂತಿಕ ದಾಳಿ

Spread the love

ಕಾರವಾರ: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ

ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *