Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಿರ್ಲಕ್ಷ್ಯದ ಚಾಲನೆಯಿಂದ ಸಾವು: ವಿಮೆ ಪಾವತಿಸುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್!

Spread the love

ನವದೆಹಲಿ : ನಿರ್ಲಕ್ಷ್ಯದ ಚಾಲನೆಯಿಂದ ಸಾವು ಸಂಭವಿಸಿದರೆ ವಿಮೆ ಪಾವತಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ 80 ಲಕ್ಷ ಪರಿಹಾರ ನೀಡುವಂತೆ ಕೋರಿ ವಿಮಾ ಕಂಪನಿಯ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ 2014ರಲ್ಲಿ, ಕರ್ನಾಟಕದಲ್ಲಿ ರವೀಶ್ ಎಂಬ ವ್ಯಕ್ತಿ ಅಜಾಗರೂಕತೆಯ ಚಾಲನೆಯಿಂದ ಸಾವನ್ನಪ್ಪಿದರು.

ಮೃತನ ಕುಟುಂಬ ಸದಸ್ಯರು ವಿಮಾ ಕಂಪನಿಯಿಂದ 80 ಲಕ್ಷ ಪರಿಹಾರವನ್ನು ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆಹೋಗಿದ್ದರು. ಸಂಚಾರ ನಿಯಮಗಳನ್ನು ಪಾಲಿಸದೇ ಅಜಾಗರೂಕತೆಯ ಚಾಲನೆಯಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದರೆ, ಅವರ ಕುಟುಂಬ ಸದಸ್ಯರು ವಿಮೆಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೃತಕ ಕುಟುಂಬ ಸದಸ್ಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ವ್ಯಕ್ತಿಯ ಸಾವಿಗೆ ವಿಮಾ ಕಂಪನಿಯು ಹೊಣೆಗಾರನಾಗಬೇಕಾಗಿಲ್ಲ ಎಂದು ತೀರ್ಪು ನೀಡಿದೆ.


Spread the love
Share:

administrator

Leave a Reply

Your email address will not be published. Required fields are marked *