Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಡುಪಿಯಲ್ಲಿ ಉದ್ಯಮಿಗಳಿಗೆ ಕೊಲೆ ಬೆದರಿಕೆ: ಹೇಮಂತ್ ಪೂಜಾರಿ ಸಹಚರ ಪೊಲೀಸ್ ಬಲೆಗೆ!

Spread the love

ಉಡುಪಿ: ಜಿಲ್ಲೆಯ (Udupi) ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ (Money) ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ (Death Threats) ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್‌ನ ಸುರೇಶ್ ಅಮೀನ್ (38) ಬಂಧಿತ ಆರೋಪಿ. ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಬೆದರಿಕೆಗೆ ಒಳಗಾದ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳು ಮತ್ತು ಇತರ ಮಾಹಿತಿಗಳನ್ನು ಆರೋಪಿ ಒದಗಿಸಿದ್ದ ಎನ್ನಲಾಗಿದೆ. ಬಂಧಿತ ಆರೋಪಿ ವಿರುದ್ಧ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಐದು, ಶಿರ್ವ ಠಾಣೆಯಲ್ಲಿ ಒಂದು, ಕಾಪು ಠಾಣೆಯಲ್ಲಿ ಒಂದು ಹಾಗೂ ಮಣಿಪಾಲ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ತನಿಖೆ ಪೊಲೀಸರು ಮುಂದುವರೆಸಿದ್ದಾರೆ.

ದಾಖಲಾಗಿರುವ ಪ್ರಕರಣಗಳ ಪೈಕಿ ಒಂದರಲ್ಲಿ ಉದ್ಯಮಿಯೊಬ್ಬರು ಬೇಡಿಕೆಯಿಟ್ಟ ಹಣ ನೀಡದೇ, ದೂರವಾಣಿ ಕರೆಗಳಿಗೂ ಪ್ರತಿಕ್ರಿಯಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಲು ಹೇಮಂತ್ ಪೂಜಾರಿ ಮತ್ತು ಸುರೇಶ್ ಅಮೀನ್ ಸಂಚು ರೂಪಿಸಿದ್ದರು ಎಂಬುದು ತಾಂತ್ರಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿ‌, ಸುರೇಶ್ ಅಮೀನ್‌ಗೆ 5 ಲಕ್ಷ ರೂ. ಕಳುಹಿಸಿದ್ದ ಎನ್ನಲಾಗಿದೆ. ಈ ಪೈಕಿ ಖರ್ಚು ಮಾಡಿದ ಹಣವನ್ನು ಹೊರತುಪಡಿಸಿ ಉಳಿದ 4.13 ಲಕ್ಷವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ಮುಂದುವರಿಸಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇರುವುದರಿಂದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *