Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೆಹಲಿ ವಿಧಾನಸಭೆಯ ಅಧಿವೇಶನ ಇಂದಿನಿಂದ ಪ್ರಾರಂಭ- ನಾಳೆ ಹಣಕಾಸು ವರ್ಷದ ಬಜೆಟ್ ಮಂಡಣೆ

Spread the love

ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ.

27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ ಮಾರ್ಚ್ 28ರ ವರೆಗೆ ಈ ಅಧಿವೇಶನ ನಡೆಯಲಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ದೆಹಲಿ ಸಿಎಂ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ.ಸಿಎಂ ರೇಖಾ ಗುಪ್ತಾ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರಿಗೆ ಮಾಸಿಕ 2,500, ವರ್ಷಕ್ಕೆ 2 ಉಚಿತ ಸಿಲಿಂಡರ್, ಯುವಕರು, ಕಾರ್ಮಿಕರ ಜೀವನ ಮಟ್ಟ ಸುಧಾರಿಸುವ ಯೋಜನೆಗಳಿಗೆ ಅನುದಾನ ಘೋಷಣೆ ಮಾಡುವ ನಿರೀಕ್ಷೆ ಇದೆ. ಇದರೊಂದಿಗೆ ಆಪ್ ಸರ್ಕಾರದ ಉಚಿತ ಯೋಜನೆಗಳನ್ನು ಮುಂದುವರಿಸುವ ಸಾಧ್ಯತೆ ಇದೆ. ಹಾಗೂ ಡಿಟಿಸಿ ಕಾರ್ಯವೈಖರಿ ಕುರಿತು ಸಿಎಜಿ ವರದಿಯನ್ನೂ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುಗುತ್ತದೆ ಎನ್ನಲಾಗಿದೆ.ಮಾರ್ಚ್ 24ರಿಂದ ಮಾರ್ಚ್ 28ರ ವರೆಗೆ ಈ ಅಧಿವೇಶನ ನಡೆಯಲಿದ್ದು, ಅಗತ್ಯವಿದ್ದಲ್ಲಿ ಈ ಅವಧಿಯನ್ನು ವಿಸ್ತರಿಸಲಾಗುತ್ತದೆ ಎಂದು ವಿಧಾನಸಭೆ ಸ್ಪೀಕರ್ ವಿಜೇಂದ್ರ ಗುಪ್ತಾ ತಿಳಿಸಿದ್ದಾರೆ. ಮಾರ್ಚ್ 26ರಂದು ಸದನದಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯಲಿದ್ದು, ಮಾರ್ಚ್ 27ರಂದು ಮಂಡಿಸಿದ ಬಿಲ್‌ಗಳಿಗೆ ಅನುಮೋದನೆ ಪಡೆಯಲಾಗುತ್ತದೆ. ಮಾರ್ಚ್ 28ರಂದು ಖಾಸಗಿ ಮಸೂದೆಗಳು ಹಾಗೂ ನಿರ್ಣಯಗಳ ಮೇಲೆ ಚರ್ಚೆ ನಡೆಯಲಿದೆ.


Spread the love
Share:

administrator

Leave a Reply

Your email address will not be published. Required fields are marked *