ದೆಹಲಿ IGI ಏರ್‌ಪೋರ್ಟ್‌ನಲ್ಲಿ ಚಿನ್ನದ ಕಳ್ಳಸಾಗಣೆ: ಒಳ ಉಡುಪಿನಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿ ತಂದ ಮಹಿಳಾ ಪ್ರಯಾಣಿಕಳು ಲಾಕ್

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ (IGI Airport) ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ.

ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ ಉಡುಪುಗಳಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿಟ್ಟುಕೊಂಡಿದ್ದಳು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಇರುವುದು ಪತ್ತೆಯಾಗಿತ್ತು.
1962ರ ಕಸ್ಟಮ್ಸ್ ಕಾಯ್ದೆಯ ಅಡಿ ಚಿನ್ನವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.