ಗದಗದಲ್ಲಿ ಆಂಬ್ಯುಲೆನ್ಸ್ನಲ್ಲೇ ಹೆರಿಗೆ: ತಾಯಿ-ಮಗು ಸುರಕ್ಷಿತ

ಗದಗ: ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಆ.6ರ ಬುಧವಾರ ನಡೆದಿದೆ.

ತಾಲೂಕಿನ ಬಳಗಾನೂರ ಗ್ರಾಮದ ನಿವಾಸಿ ಚನ್ನವ್ವ ಹೆರಿಗೆ ನೋವಿನಿಂದ ಬಳಲುತ್ತಿದ್ದಳು.
ಬುಧವಾರ ತಡರಾತ್ರಿ 108 ಅಂಬುಲೆನ್ಸ್ ಗೆ ಕರೆ ಮಾಡಿದ್ದರು. ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ಕರೆ ತರುವ ಮಾರ್ಗ ಮಧ್ಯೆ ಹೆರಿಗೆ ನೋವು ಜಾಸ್ತಿಯಾಗಿದ್ದು, ಹೀಗಾಗಿ ಅಂಬುಲೆನ್ಸ್ ಸಿಬ್ಬಂದಿ ಅಂಬುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿದ್ದಾರೆ.
ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಚನ್ನವ್ವ ಸದ್ಯ ಸುರಕ್ಷಿತವಾಗಿದ್ದಾರೆ. ತಾಯಿ ಮತ್ತು ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
108 ರ ಸಿಬ್ಬಂದಿಗಳಾದ ಬಸವರಾಜ ಕಂಬಳಿ ಹಾಗೂ ಜೀವಪ್ಪ ಅವರಿಗೆ ಸಾರ್ವಕನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
