Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ನನ್ನ ಮತ, ನನ್ನ ಹಕ್ಕು’ ಘೋಷವಾಕ್ಯದಡಿ ಪ್ರಜಾಪ್ರಭುತ್ವ ದಿನಾಚರಣೆ

Spread the love

ಬೆಂಗಳೂರು: ಸೆಪ್ಟೆಂಬರ್ 15 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ‘ನನ್ನ ಮತ, ನನ್ನ ಹಕ್ಕು’ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಸರ್ಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ. ಸೆ.15ರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಷಯವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರವನ್ನು ಒತ್ತಿ ಹೇಳುತ್ತದೆ. ಮತದಾನವು ಬರೀ ಹಕ್ಕು ಮಾತ್ರವಲ್ಲ, ಬದಲಾಗಿ ಅದೊಂದು ಹೊಣೆಗಾರಿಕೆಯೂ ಆಗಿದೆ ಎಂಬ ಸಂದೇಶವನ್ನು ಸಾರಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮವು ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಮಹದೇವಪ್ಪ ತಿಳಿಸಿದರು.

ಕೆಸೆಟ್, ನೀಟ್ ಮತ್ತು ಜೆಇಇ ಪರೀಕ್ಷೆಗಳಲ್ಲಿ ಉತ್ತಮ ಸ್ಥಾನಗಳನ್ನು ಗಳಿಸಿದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆದ ಒಂದು ಸಾವಿರ ಪ್ರತಿಭಾನ್ವಿತ ಪಿಯು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಕಾರ್ಯಕ್ರಮದಲ್ಲಿ ನೇರ ನಗದು ವರ್ಗಾವಣೆ ಮೂಲಕ 6 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ವಿತರಿಸಲಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲಾಡಳಿತದ ನೇತೃತ್ವದಲ್ಲಿ ಪ್ರತಿ ಜಿಲ್ಲೆಗಳಲ್ಲೂ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಪ್ರಜಾಪ್ರಭುತ್ವ ಮತ್ತು ಏಕತೆಯ ಸಂದೇಶಗಳನ್ನು ಹೊತ್ತ ಬೈಕ್‍ಗಳು ಎಲ್ಲ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿನವರೆಗೆ ಬೈಕ್ ಜಾಥಾ ನಡೆಸಲಿವೆ ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವದ ಮೌಲ್ಯಗಳ ಸೃಜನಶೀಲ ಅಭಿವ್ಯಕ್ತಿತ್ವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ಹಾಗೂ ಲಿಡ್ಕರ್ ಪ್ರಾಯೋಜಕತ್ವದಲ್ಲಿ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹದೇವಪ್ಪ ಹೇಳಿದರು.

ದೈನಂದಿನ ಜೀವನದಲ್ಲಿ ಪ್ರಜಾಪ್ರಭುತ್ವದ ಪಾತ್ರವನ್ನು ಚಿತ್ರಗಳ ಮೂಲಕ ಪ್ರದರ್ಶಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಿದೆ. ಕ್ರೈಸ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ‘ನನ್ನ ಮತ, ನನ್ನ ಹಕ್ಕು’, ಸಂವಿಧಾನದ ಪೀಠಿಕೆ ಮತ್ತು ಮಹಾತ್ಮ ಗಾಂಧೀಜಿ ಅವರ ದೃಷ್ಟಿಕೋನದಲ್ಲಿ ‘ಗಾಂಧಿ ಭಾರತ’ ಈ ಮೂರು ವಿಷಯಗಳು ಭಾಷಣ ವಿಷಯ ವಸ್ತುವಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಮತ್ತು ಯುವಕರು ಪ್ರಜಾಪ್ರಭುತ್ವ ಮೌಲ್ಯಗಳನ್ನು ಸೃಜನಶೀಲವಾಗಿ ವ್ಯಕ್ತಪಡಿಸಲು ಮತ್ತು ಜಾಗೃತಿ ಮೂಡಿಸುವುದನ್ನು ಪ್ರೋತ್ಸಾಹಿಸಲು ಚಿತ್ರಕಲೆ, ಛಾಯಾಚಿತ್ರ ಮತ್ತು ಚರ್ಚಾ ಸ್ಪರ್ಧೆಗಳಿಗೆ ಚಾಲನೆ ನೀಡಲಾಗುವುದು. ನ.26ರವರೆಗೆ ಈ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *