Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣು; ಕಣ್ಣೀರಿಟ್ಟ ಒಂದೂವರೆ ವರ್ಷದ ಕಂದಮ್ಮ!

Spread the love

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ (Dharwad) ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಪತ್ನಿಯನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು

ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ತಡರಾತ್ರಿವರೆಗೂ ಮನೆಯಲ್ಲಿ ಏನೂ ಶಬ್ದ ಬಾರದೇ ಇದ್ದಿದ್ದರಿಂದ ವೃದ್ಧೆಯೊಬ್ಬರು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಸಲ್ಮಾ ಮನೆಯವರು ಗರಗ ಗ್ರಾಮಕ್ಕೆ ಬರುತ್ತಿದ್ದಂತೆಯೇ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ಸಂಭವಿಸಿದೆ. ಎರಡೂ ಕುಟುಂಬದವರು ಪರಸ್ಪರ ಹೊಡೆದಾಟಕ್ಕೆ ಮುಂದಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *