Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ಚೀನಾ? ಟ್ರಂಪ್ ಬೆನ್ನಲ್ಲೇ ಮಧ್ಯಸ್ಥಿಕೆಯ ‘ಕ್ರೆಡಿಟ್’ಗೆ ಮುಂದಾದ ಬೀಜಿಂಗ್!

Spread the love

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ (India-Pakistan) ನಡುವಿನ ಯುದ್ಧವನ್ನು ನಿಲ್ಲಿಸಿದ್ದು ನಾವೇ ಎಂದು ಚೀನಾ ಹೇಳಿಕೊಂಡಿದೆ. ಕ್ರೆಡಿಟ್‌ ಆಸೆಗಾಗಿ ಜಾಗತಿಕ ವೇದಿಕೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈ ಹೇಳಿಕೆ ಮೂಲಕ ಬೊಬ್ಬೊ ಹೊಡೆದಿದ್ದರು. ಈಗ ಟ್ರಂಪ್‌ ಜಾಗಕ್ಕೆ ಚೀನಾ ಬಂದಿದೆ.

ಚೀನಾದ (China) ವಿದೇಶಾಂಗ ಸಚಿವ ವಾಂಗ್ ಯಿ, ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಶಮನಕ್ಕೆ ಚೀನಾ ಮಧ್ಯಸ್ಥಿಕೆ ವಹಿಸಿತು. ಸಮಸ್ಯೆಯನ್ನು ಪರಿಹರಿಸಲು ನ್ಯಾಯಯುತ ನಿಲುವು ಅಳವಡಿಸಿಕೊಂಡಿದೆ ಎಂದು ಹೇಳಿಕೊಂಡಿದ್ದಾರೆ

ಸಂಭಾವ್ಯ ಯುದ್ಧವನ್ನು ನಿಲ್ಲಿಸಲು ಅಮೆರಿಕ ಮಧ್ಯಪ್ರವೇಶಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದರು. ಭಾರತವು ಮೂರನೇ ವ್ಯಕ್ತಿಯ ಹಸ್ತಕ್ಷೇಪವನ್ನು ದೃಢವಾಗಿ ತಿರಸ್ಕರಿಸಿತ್ತು. ನೇರ ದ್ವಿಪಕ್ಷೀಯ ಸಂವಹನದ ಮೂಲಕ ಕದನ ವಿರಾಮವನ್ನು ಸಾಧಿಸಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದರೂ, ಅಮೆರಿಕ ಮತ್ತು ಚೀನಾ ಉದ್ಧಟತನದ ಹೇಳಿಕೆಗಳನ್ನು ನೀಡುತ್ತಿವೆ.

ಎರಡನೇ ಮಹಾಯುದ್ಧದ ನಂತರ ಇತ್ತೀಚೆಗೆ ಹೆಚ್ಚಾಗಿ ಸ್ಥಳೀಯ ಯುದ್ಧಗಳು ಮತ್ತು ಗಡಿಯಾಚೆಗಿನ ಘರ್ಷಣೆಗಳು ಭುಗಿಲೆದ್ದವು. ಭೌಗೋಳಿಕ ರಾಜಕೀಯ ಪ್ರಕ್ಷುಬ್ಧತೆ ಹರಡುತ್ತಲೇ ಇತ್ತು. ಶಾಶ್ವತವಾದ ಶಾಂತಿಯನ್ನು ನಿರ್ಮಿಸಲು, ನಾವು ವಸ್ತುನಿಷ್ಠ ಮತ್ತು ನ್ಯಾಯಯುತ ನಿಲುವನ್ನು ತೆಗೆದುಕೊಂಡಿದ್ದೇವೆ. ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸಿದ್ದೇವೆ ಎಂದು ಬೀಜಿಂಗ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಪರಿಸ್ಥಿತಿ ಮತ್ತು ಚೀನಾದ ವಿದೇಶಾಂಗ ಸಂಬಂಧಗಳ ಕುರಿತಾದ ವಿಚಾರ ಸಂಕಿರಣದಲ್ಲಿ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ನೀಡಿದ್ದಾರೆ

ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಚೀನಾದ ಈ ವಿಧಾನವನ್ನು ಅನುಸರಿಸಿ ನಾವು ಉತ್ತರ ಮ್ಯಾನ್ಮಾರ್, ಇರಾನಿನ ಪರಮಾಣು ಸಮಸ್ಯೆ, ಪಾಕಿಸ್ತಾನ ಮತ್ತು ಭಾರತದ ನಡುವಿನ ಉದ್ವಿಗ್ನತೆ, ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವಿನ ಸಮಸ್ಯೆಗಳು ಮತ್ತು ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಇತ್ತೀಚಿನ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಮೇ 7 ರಂದು ಪ್ರಾರಂಭವಾದ ಮಿಲಿಟರಿ ಸಂಘರ್ಷವನ್ನು ಎರಡೂ ದೇಶಗಳ ಸೇನೆಗಳ ಡಿಜಿಎಂಒಗಳು (ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು) ನೇರ ಮಾತುಕತೆಯ ಮೂಲಕ ಪರಿಹರಿಸಲಾಗಿದೆ ಎಂದು ನವದೆಹಲಿ ಸಮರ್ಥಿಸಿಕೊಂಡಿದೆ.


Spread the love
Share:

administrator

Leave a Reply

Your email address will not be published. Required fields are marked *