Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

2008 ಮುಂಬೈ ದಾಳಿಯಲ್ಲಿ ಭಯೋತ್ಪಾದಕ ಪಾತ್ರ ಒಪ್ಪಿಕೊಂಡ್ರಾ ತಹವ್ವೂರ್ ರಾಣಾ?

Spread the love

ನವದೆಹಲಿ: ಮುಂಬೈ ದಾಳಿಯ (Mumbai Attack) ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ (Tahawwur Rana) 2008 ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ ಮತ್ತು ತಾನು ಪಾಕಿಸ್ತಾನಿ ಸೇನೆಯ (Pakistan Army) ವಿಶ್ವಾಸಾರ್ಹ ಏಜೆಂಟ್ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯ ತಿಹಾರ್ ಜೈಲಿನಲ್ಲಿ (Tihar Jail) ರಾಷ್ಟ್ರೀಯ ತನಿಖಾ ದಳದ (NIA) ವಶದಲ್ಲಿರುವ ರಾಣಾನನ್ನು ಮುಂಬೈ ಕ್ರೈಂ ಬ್ರ್ಯಾಂಚ್‌ ವಿಚಾರಣೆಯ ಸಂದರ್ಭದಲ್ಲಿ ತಾನು ಮತ್ತು ತನ್ನ ಸ್ನೇಹಿತ ಮತ್ತು ಸಹಾಯಕ ಡೇವಿಡ್ ಕೋಲ್ಮನ್ ಹೆಡ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ( Lashkar-e-Taiba) ಜೊತೆ ಹಲವಾರು ತರಬೇತಿ ಕಾರ್ಯ ನಡೆಸಿದ್ದೇವೆ ಎಂದು ತಿಳಿಸಿದ್ದಾನೆ.

ವಿಚಾರಣೆ ವೇಳೆ ಮುಂಬೈನಲ್ಲಿ ತನ್ನ ಸಂಸ್ಥೆಯ ವಲಸೆ ಕೇಂದ್ರವನ್ನು ತೆರೆಯುವ ಆಲೋಚನೆ ಇತ್ತು. ಮುಂಬೈ ದಾಳಿಯ ಸಮಯದಲ್ಲಿ ತಾನು ಮುಂಬೈನಲ್ಲಿದ್ದೆ ಮತ್ತು ಅದು ಭಯೋತ್ಪಾದಕರ ಯೋಜನೆಯ ಭಾಗವಾಗಿತ್ತು ಎಂದು ಹೇಳಿದ್ದಾನೆ.

ದಾಳಿಗೂ ಮೊದಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಂತಹ ಸ್ಥಳಗಳನ್ನು ಪರಿಶೀಲಿಸಿದ್ದೆ. ಮುಂಬೈ ದಾಳಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಸಹಯೋಗದೊಂದಿಗೆ ನಡೆಸಲಾಗಿದೆ ಎಂದು ರಾಣಾ ಒಪ್ಪಿಕೊಂಡಿದ್ದಾನೆ.

ಗಲ್ಫ್‌ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಸೇನೆಯು ತನ್ನನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಿತ್ತು ಎಂದು 64 ವರ್ಷದ ರಾಣಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಹುಡಗಿ ಎದುರು ಯುವಕನನ್ನು ಬೆತ್ತಲೆಗೊಳಿಸಿದ ಆರೋಪಿಗಳು
ಕುಶಾಲ್​ನನ್ನು ಕಾರಿನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಕಾರಿನಲ್ಲಿ ಹುಡುಗಿಯೂ ಇದ್ದಳು. ಕಾರ್​ನಲ್ಲಿ ಹುಡಗಿ ಮುಂದೆಯೇ ಆರೋಪಿಗಳು ಕುಶಾಲ್​ ಮೇಲೆ ಹಲ್ಲೆ ಮಾಡಿದ್ದಾರೆ. ಹಾಡು ಹೇಳುವಂತೆ ಒತ್ತಾಯಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಮೇಲೆ ಆರೋಪಿಗಳು ಹುಡುಗಿಯ ಮುಂದೆಯೇ ಯುವಕ ಕುಶಾಲ್​ನ ಬಟ್ಟೆ ಬಿಚ್ಚಿಸಿ ಬೆತ್ತಲು ಗೋಳಿಸಿ ವಿಕೃತಿ ಮೆರೆದಿದ್ದಾರೆ. ಬಳಿಕ, ಯುವಕ ಕುಶಾಲ್​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

11 ಜನ ಆರೋಪಿಗಳ ಬಂಧನ
ಪ್ರಕರಣ ಸಂಬಂಧ ಹುಡುಗಿ ಸೇರಿದಂತೆ 11 ಜನರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ 8 ಜನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆರೋಪಿಗಳಾದ ಶಶಾಂಕ್ ಗೌಡ, ಸಲ್ಮಾನ್, ಯಶ್ವಂತ್, ವಿದ್ಯಾರ್ಥಿಗಳಾದ ತೇಜಸ್, ರಾಕೇಶ್, ರಾಹುಲ್ ಮತ್ತು ಹೇಮಂತ್​​ ಬಿಡುಗಡೆಯಾದವರು. ಆರೋಪಿ ಹೇಮಂತ ಈ ಹಿಂದೆ ಹಲವು ಬಾರಿ ಹಲ್ಲೆ ಪ್ರಕರಣದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಬಂದಿದ್ದಾನೆ.

ಗೃಹ ಸಚಿವರು ಹೇಳಿದ್ದಿಷ್ಟು
ಪ್ರಕರಣ ಸಂಬಂಧ ಗೃಹ ಸಚಿವ ಜಿ. ಪರಮೇಶ್ವರ್​ ಮಾತನಾಡಿ, ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ರೇಣುಕಾಸ್ವಾಮಿ ಪ್ರಕರಣ ಪ್ರೇರಣೆ ಆಗುತ್ತಿದೆಯಾ ಅನ್ನೋದು ಗೊತ್ತಿಲ್ಲ. ಆ ಬಗ್ಗೆ ಮನಶ್ಶಾಸ್ತ್ರಜ್ಞರು ಅಧ್ಯಯನ ಮಾಡಿ ಹೇಳಬೇಕಾಗುತ್ತದೆ ಎಂದು ಹೇಳಿದರು. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *