ಕೊನೆಗೂ ಪತ್ತೆಯಾದ ದಿಗಂತ್ – ತನಿಖೆಗೆ ಹೊಸ ತಿರುವು!


ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ. ಅನೇಕ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಪಶ್ಚಿಮ ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್ ಪೆಕ್ಟರ್ ಗಳನ್ನು ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಕ್ರೈಮ್ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿರುವ ಸಿಬ್ಬಂದಿಗಳನ್ನು ತನಿಖೆ ಕಾರ್ಯ ನಡೆಸುತ್ತಿದ್ದರು.
ಇದೀಗ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿಯಲಾಗಿದೆ.ಇಂದು ಬೆಳಿಗ್ಗೆಯಿಂದ ದಿಗಂತ್ ಪತ್ತೆಗಾಗಿ ಕೂಬಿಂಗ್ ಕಾರ್ಯ ಕೊಡ ನಡೆದಿತ್ತು.
