Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜ. 6ಕ್ಕೆ ಡಿಕೆಶಿ ಸಿಎಂ?: ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

Spread the love

ರಾಮನಗರ : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾಳಗ ಮುಂದುವರೆದಿದ್ದು, ಜನವರಿ 6 ರಂದು ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 6 ರಂದು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನ ಬಿಟ್ಟುಕೊಡಬೇಕು. ಪ್ರಾಯಶಿತ ಜ.6 ರಂದು ಅವರು ಸಿಎಂ ಪಟ್ಟಕ್ಕೇರಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ಅಧಿವೇಶನ ಆದ ಮೇಲೆ ಡಿಕೆಶಿ ಸಿಎಂ ಆಗ್ತಾರೆ. ಜನವರಿ 6 ಅಥವಾ 9 ರಂದು ಡಿಕೆಶಿ ಸಿಎಂ ಆಗೋದು ಖಚಿತ ಎಂದಿದ್ದಾರೆ. ನನ್ನ ಸ್ಪಷ್ಟ ಅಭಿಪ್ರಾಯವನ್ನು ಹೈ ಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಕಾಂಗ್ರೆಸ್ ಶಿಸ್ತಿನ ಪಕ್ಷ ಹೈ ಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರು ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ.

ಅನಿಸಿಕೆ, ಅಭಿಲಾಷೆಯನ್ನ ಹೈಕಮಾಂಡ್ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ ಇದಕ್ಕೆ ನಾನು ಬದ್ಧನಾಗಿದ್ದೇನೆ, ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಹಿಂದೆ ಕೂಡ ಹೇಳಿದ್ದೆ, ಈಗಲೂ ಹೇಳುತ್ತೇನೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಕೊಪ್ಪಳದಲ್ಲಿ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದರು.


Spread the love
Share:

administrator

Leave a Reply

Your email address will not be published. Required fields are marked *