Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಜಯಪುರದಲ್ಲಿ ಜೋಡಿ ಕೊಲೆ: ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆ!

Spread the love

ವಿಜಯಪುರ: ಜಿಲ್ಲೆಯಲ್ಲಿ ಜೋಡಿ ಕೊಲೆ ಆಗಿವೆ. ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.

ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬುವವರ ಕೊಲೆಯಾಗಿದ್ದಾರೆ. ಇನ್ನು ಅಪರಿಚಿತರಿಂದ ಈ ಕೃತ್ಯ ನಡೆದಿದ್ದು, ಹತ್ಯೆಯ ನಂತರ ಹಂತಕರು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಇಬ್ಬರನ್ನು ಕೊಲೆಗೈದಿರೋ ಶಂಕೆ ವ್ಯಕ್ತವಾಗಿದೆ. 

ಎರಡು ವರ್ಷಗಳ ಹಿಂದೆ ಈರನಗೌಡ ಎಂಬಾತನ ಮೇಲೆ ಇಸಾಕ್ ಖರೇಷಿ ಹಾಗೂ ಸಾಗರ ತೀವ್ರ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರಣಗೌಡ ಮೃತಪಟ್ಟಿದ್ದನಂತೆ. ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ ಸಂಶಯ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *