Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸುರಕ್ಷತೆಗೆ ಅನುಮಾನ: ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ ಕಾಮುಕ ಚಾಲಕನ ದುರ್ವರ್ತನೆ

Spread the love

ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಹೆಣ್ಮಕ್ಕಳಿಗೆ ಸೇಫ್ ಅಲ್ವಾ ಅನ್ನೋ ಅನುಮಾನ ಶುರುವಾಗಿದೆ. ಇಲ್ಲೊಬ್ಬ ಕಾಮುಕ ಬೈಕ್ ಟ್ಯಾಕ್ಸಿ ಚಾಲಕ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.

ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ ದುರ್ವರ್ತನೆ ತೋರಿದ್ದಾನೆ. ಯುವತಿ ಕಾಲಿನ ಮೇಲೆ ಚಾಲಕ ಕೈ ಇಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ನವೆಂಬರ್ 6ರಂದು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಘಟನೆಯ ವಿಡಿಯೋ ಮಾಡಿ ಯುವತಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. KA55 EA4344 ಬೈಕ್ ರೈಡ್ ಮಾಡುತ್ತಿದ್ದ ಚಾಲಕ ಲೋಕೇಶ್ ದುರ್ವರ್ತನೆ ತೋರಿದ್ದಲ್ಲದೇ, ಪ್ರಶ್ನಿಸಿದ್ರೂ ಮತ್ತೆ ಯುವತಿಯ ಮೈ ಮುಟ್ಟಿ ಕಿರುಕುಳ ನೀಡಿದ್ದಾನೆ.

ಸ್ಥಳಕ್ಕೆ ತಲುಪಿದ ಬಳಿಕ ಯುವತಿಯ ಸ್ನೇಹಿತ ಚಾಲಕನನ್ನ ತರಾಟೆ ತೆಗೆದುಕೊಂಡಿದ್ದು, ಚಾಲಕ ತಪ್ಪಾಯ್ತು ಎಂದು ಒಪ್ಪಿಕೊಂಡಿದ್ದಾನೆ. ಬೈಕ್ ಟ್ಯಾಕ್ಸಿ ಚಾಲಕನ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *