Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸ ವರ್ಷಕ್ಕೆ ಸಿದ್ಧವಾಗಿದ್ದ ₹28.75 ಕೋಟಿ ಮೌಲ್ಯದ ಡ್ರಗ್ಸ್ ವಶ

Spread the love

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಡ್ರಗ್ಸ್ ಜಾಲದ ಸಂಬಂಧ ತಾಂಜೇನಿಯಾ ಮೂಲದ ನ್ಯಾನ್ಸಿ ಮತ್ತು ನೈಜೀರಿಯಾ ಮೂಲದ ಎಮುನಲ್ ಅರೆಂಜಿ ಇಡಿಕೋ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ನ್ಯಾನ್ಸಿ ಮೂರು ವರ್ಷಗಳ ಹಿಂದೆ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದಳು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಈಕೆ ಡ್ರಗ್ ಪೆಡ್ಲಿಂಗ್‌ನಲ್ಲಿ ಸಕ್ರಿಯಳಾಗಿದ್ದಳು. ಈಕೆಗೆ ಸಹಕರಿಸುತ್ತಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಗಳು ಸ್ಥಳೀಯರು, ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಇನ್ನೊಬ್ಬ ಆರೋಪಿ ಎಮುನಲ್ ಅರೆಂಜಿ ಇಡಿಕೋ ನಾಲ್ಕು ವರ್ಷಗಳ ಹಿಂದೆ ವ್ಯಾಪಾರ ವೀಸಾದಡಿ ಭಾರತಕ್ಕೆ ಬಂದಿದ್ದ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಈತ ದೆಹಲಿಯಿಂದ ಡ್ರಗ್ಸ್ ತರಿಸಿ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ.

ವಿಶೇಷವಾಗಿ ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿನ ಲಾಭಗಳಿಸುವ ಉದ್ದೇಶದಿಂದ ಡ್ರಗ್ಸ್ ಸಂಗ್ರಹಿಸಿ ಮಾರಾಟ ಮಾಡಲು ಯೋಜಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ, ಮಾದಕ ದ್ರವ್ಯ ನಿಗ್ರಹದಳದ ಪೊಲೀಸರು, ಕೋಟಿಗಟ್ಟಲೆ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *