ಆನೆ ದಾಳಿಗೆ ತೋಟದಲ್ಲಿ ಹೋದ 72 ವರ್ಷದ ವ್ಯಕ್ತಿ ಸ್ಥಳದಲ್ಲೇ ಬಲಿ

ಸುಳ್ಯ: ಆನೆ ದಾಳಿ ತೋಟದಲ್ಲಿ ಹೋದ 72 ವರ್ಷದ ಶಿವಪ್ಪ ಸ್ಥಳದಲ್ಲೇ ಬಲಿವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ

ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆಗೆ ದಾಳಿಗೆ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಆಗಸ್ಟ್ 6ರ ರಾತ್ರಿ ಸುಮಾರು 10.30 ರ ಸುಮಾರಿಗೆ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೋಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭದಲ್ಲಿ ಅವರ ಮೇಲೆ ಆನೆ ದಾಳಿ ನಡೆಸಿದೆ. ಮನೆಯವರು ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.