Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಉಗ್ರ ಲತೀಫ್ ಭಟ್(Latief Bhat) ಸೇರಿ  ಮತ್ತೊಬ್ಬ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.ಕಳೆದ ವಾರ ಇದೇ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ (CRPF) ಯೋಧರು ಗಾಯಗೊಂಡಿದ್ದರು. ಎನ್‌ಕೌಂಟರ್ ನಡೆಯುತ್ತಿರುವ ಇಡೀ ಪ್ರದೇಶವನ್ನು ಇತರ ಭದ್ರತಾ ಪಡೆಗಳು  ಸುತ್ತುವರೆದಿತ್ತು. ಸಮೀಪದ ಸೇನಾ ಘಟಕಗಳು ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ (SOG) ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.ಕುಲ್ಗಾಮ್ ನಿವಾಸಿಯಾದ ಲತೀಫ್ ಭಟ್, ಸ್ಥಳೀಯ ಬೆಂಬಲಿಗರ ಸಹಾಯದಿಂದ ದಕ್ಷಿಣ ಕಾಶ್ಮೀರದ ಅಡಗುತಾಣಗಳಲ್ಲಿ ಪಾಕಿಸ್ತಾನಿ(Pakistan) ಉಗ್ರರೊಂದಿಗೆ ಸೇರಿ ಕಾರ್ಯಾಚರಣೆ ನಡೆಸುತ್ತಿದ್ದ. ಜುಲೈ 22ರಂದು ಅನಂತನಾಗ್‌ನ ಲಾಲ್ ಚೌಕ್ ಪ್ರದೇಶದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ಹತ್ಯೆ ಮತ್ತು ಜುಲೈ 31ರಂದು ಕುಲ್ಗಾಮ್‌ನಲ್ಲಿ ನಡೆದ ವಲಸೆ ಕಾರ್ಮಿಕರ ಹತ್ಯೆ ಸೇರಿದಂತೆ 2026ರಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಗಳಲ್ಲಿ ಭಟ್ ಭಾಗಿಯಾಗಿದ್ದನು ಎಂದು ಮೂಲಗಳು ತಿಳಿಸಿವೆ.ನವೆಂಬರ್ 11ರಂದು ಕುಲ್ಗಾಮ್‌ನ ಮೀರ್ ಬಜಾರ್ ಬಳಿಯ ಸಿಆರ್‌ಪಿಎಫ್ ಶಿಬಿರದ ಮೇಲೆ ಭಾರಿ ಶಸ್ತ್ರಸಜ್ಜಿತ ಇಬ್ಬರು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿತ್ತು. ದಾಳಿಯ ಬಳಿಕ ಉಗ್ರರು ಅರಣ್ಯ ಪ್ರದೇಶಕ್ಕೆ ಪರಾರಿಯಾಗಿದ್ದರು. ಈ ಘಟನೆ ನಡೆದ 24 ಗಂಟೆಗಳ ಒಳಗಾಗಿ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ಸೇನೆಯೊಂದಿಗೆ ತೆರಳುತ್ತಿದ್ದ ಬಾಬಿ ಚಂದ್ ಮತ್ತು ಯಶ್‌ಪಾಲ್ ಕುಮಾರ್ ಎಂಬ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳನ್ನು (SPO) ಉಗ್ರರು ಹತ್ಯೆ ಮಾಡಿದ್ದರು.ಕಾರ್ಯಾಚರಣೆಯಲ್ಲಿ ಹತ್ಯೆಯಾದ ಮತ್ತೊಬ್ಬ ಉಗ್ರನ ಗುರುತು ಹಾಗೂ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. ಕಳೆದ ವಾರದ ದಾಳಿಯ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಸಿಆರ್‌ಪಿಎಫ್ ವಿಶೇಷ ಮಹಾನಿರ್ದೇಶಕ (SDG) ಸಂದೀಪ್ ಖಿರ್ವಾರ್ ಸೋಮವಾರ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *