ಲಕ್ನೋದಲ್ಲಿ 3 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ ಆರೋಪಿಯ ಎನ್ಕೌಂಟರ್

ಲಕ್ನೋ: ತಾಯಿಯ ಜೊತೆ ಮಲಗಿದ್ದ ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ.
ನಗರ ಪೊಲೀಸ್ ಠಾಣೆಗಳಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಆರೋಪಿ ದೀಪಕ್ ವರ್ಮಾ ಪೊಲೀಸ್ ಎನ್ಕೌಂಟರ್ಗೆ ಬಲಿಯಾಗಿದ್ದಾನೆ.

ಅಲಂಬಾಗ್ ಮೆಟ್ರೋ ನಿಲ್ದಾಣದ ಬಳಿಯ ಸೇತುವೆಯ ಕೆಳಗೆ ತನ್ನ ತಾಯಿಯೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮಲಗಿದ್ದಳು. ಬಾಲಕಿಯನ್ನು ಅಪಹರಿಸಿದ ಬಳಿಕ ದೀಪಕ್ ವರ್ಮಾ ಬೆಳಗ್ಗೆ 3:30ಕ್ಕೆ ಸ್ಕೂಟರ್ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.