Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಒಂದೇ ಕುಟುಂಬದ ಏಳು ಮಂದಿ ಬಲಿ

Spread the love

ಇಂದೋ‌ರ್: ಮೂರು ಅಂತಸ್ತಿನ ಮನೆಯ ಹೊರಗಿದ್ದ ವಿದ್ಯುತ್ ಚಾಲಿತ ಕಾರಿನ ಇವಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ ಬಳಿಕ ಉಂಟಾದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋ‌ರ್ ನಗರದಲ್ಲಿ ಬುಧವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಿಂದಾಗಿ ಮನೆಯೊಳಗಿದ್ದ ಕೆಲವು ಅನಿಲ ಸಿಲಿಂಡರ್ ಗಳೂ ಸ್ಫೋಟಗೊಂಡಿದ್ದು, ಇದರಿಂದ ಬೆಂಕಿಯ ಜ್ವಾಲೆ ಮತ್ತಷ್ಟು ತೀವ್ರಗೊಂಡಿದೆ ಎಂದು ಹೇಳಿದ್ದಾರೆ.
ಬ್ರಜೇಶ್ವರಿ ಅನೆಕ್ಟ್ ಕಾಲನಿಯಲ್ಲಿರುವ ಮನೆಯಲ್ಲಿ ಮುಂಜಾನೆ 3.30ರಿಂದ 4.30ರ ನಡುವೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸಹಾಯಕ ಪೊಲೀಸ್‌ ಆಯುಕ್ತ ಕುಂದನ್ ಮಂದ್ರೋಯಿ ತಿಳಿಸಿದ್ದಾರೆ. ಈ ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ಘಟನೆಯ ಬೆನ್ನಿಗೇ ಮಗುವೊಂದು ನಾಪತ್ತೆಯಾಗಿದ್ದು, ಅದರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
“ಮನೆಯ ಹೊರಗೆ ಕಾರೊಂದು ಚಾರ್ಜ್ ಮಾಡಲಾಗುತ್ತಿತ್ತು. ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ್ದು, ಇದರ ಬೆನ್ನಿಗೇ ಮನೆಗೆ ಬೆಂಕಿ ತಗುಲಿದೆ” ಎಂದು ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.
ಮನೆಯೊಳಗಿದ್ದ ಅನಿಲ ಸಿಲಿಂಡರ್ ಗಳೂ ಈ ಘಟನೆಯಲ್ಲಿ ಸ್ಫೋಟಗೊಂಡು, ಬೆಂಕಿಯ ಜ್ವಾಲೆ ಮತ್ತಷ್ಟು ತೀವ್ರಗೊಂಡಿದೆ. ಈ ವೇಳೆ ಮನೆಯೊಳಗೆ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಂಡಾಗ ಮನೆಯಲ್ಲಿ ಸುಮಾರು 10 ಮಂದಿಯಿದ್ದರು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಮರೇಂದ್ರ ಸಿಂಗ್ ತಿಳಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಮೃತಪಟ್ಟಿರುವ ಏಳು ಮಂದಿಯ ಮೃತದೇಹವನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಸರಕಾರಿ ಮಹಾತ್ಮ ಗಾಂಧಿ ಸ್ಮಾರಕ ಕಾಲೇಜಿನ ಡೀನ್ ಡಾ.ಅರವಿಂದ್ ಘಂಘೋರಿಯ ಹೇಳಿದ್ದಾರೆ.
ಅಗ್ನಿ ಅವಘಡದ ವೇಳೆ ರಕ್ಷಿಸಲಾಗಿದ್ದ ಇಬ್ಬರು ವ್ಯಕ್ತಿಗಳನ್ನು ಆಸ್ಪತ್ರೆಗೆ ಕರೆ ತರಲಾಗಿದೆ. ಅವರು ಪ್ರಥಮ ಚಿಕಿತ್ಸೆ ಪಡೆದ ನಂತರ ಬೇರೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬಯಕೆ ವ್ಯಕ್ತಪಡಿಸಿದರು ಹಾಗೂ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *