Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ರೀಲ್ಸ್ ಹುಚ್ಚಾಟ; ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿವಾದ!

Spread the love

ಬೆಂಗಳೂರು: ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರು ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟ ನಡೆಸಿ ರೀಲ್ಸ್ ಮಾಡುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ರೀಲ್ಸ್ ಹುಚ್ಚಾಟಕ್ಕೆ ಮಿತಿಯೇ ಇಲ್ಲದಂತಾಗಿದ್ದು, ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅಪಾಯಕಾರಿ ರೀತಿಯಲ್ಲಿ ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟ ನಡೆಸಿ ವಿಡಿಯೋ ಚಿತ್ರೀಕರಿಸುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದಾರೆ.

ಮುನ್ನೆಚ್ಚರಿಕೆ ಇಲ್ಲದೆ ಸ್ಫೋಟಕ ಬಳಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಈ ಕೃತ್ಯದ ವಿರುದ್ಧ ನೆಟ್ಟಿಗರು ಕೆಂಡಾಮಂಡಲವಾಗಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ರಜತ್ ಕಿಶನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಜಿಎಫ್ ಚಿತ್ರದ ನಟ ಯಶ್ ಅವರ ಡೈಲಾಗ್ ಬಳಸಿ ರೀಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ.ಈ ವಿಡಿಯೋದಲ್ಲಿ ಅವರು ಬೈಕ್ ಮೇಲೆ ಎಂಟ್ರಿ ಕೊಡುವಾಗ ಹಿನ್ನೆಲೆಯಲ್ಲಿ ಪೆಟ್ರೋಲ್ ಬಾಂಬ್ ಮಾದರಿಯ ಬೆಂಕಿಯ ಸ್ಫೋಟದ ದೃಶ್ಯಗಳಿವೆ. ಕವರ್‌ನಲ್ಲಿ ಪೆಟ್ರೋಲ್ ಹಾಕಿ ಈ ಸ್ಫೋಟದ ದೃಶ್ಯವನ್ನು ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ.ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ ಇಂತಹ ಸ್ಫೋಟಕಗಳನ್ನು ಬಳಸಿ ವಿಡಿಯೋ ಮಾಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ: ಯಾವುದೇ ಅನಾಹುತ ಸಂಭವಿಸಿದರೆ ಯಾರು ಹೊಣೆ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ವಿಡಿಯೋದ ಕ್ಯಾಪ್ಶನ್‌ನಲ್ಲಿ ರಜತ್, “ಇದು ಸುಮ್ಮನೆ ತಮಾಷೆಗೆ ಮಾಡಿದ್ದು, ಇದಕ್ಕೂ ಕೇಸ್ ಹಾಕಬೇಡ್ರಪ್ಪ” ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿ ಕೆಲವರು ತಮಾಷೆ ಮಾಡಿದರೆ, ಇನ್ನು ಕೆಲವರು ಪರಿಸರ ಹಾನಿ ಮತ್ತು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಇಂತಹ ಕೃತ್ಯಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪೊಲೀಸರು ಇದರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಕಾದು ನೋಡಬೇಕಿದೆ.


Spread the love
Share:

administrator

Leave a Reply

Your email address will not be published. Required fields are marked *