ಗರ್ಭಿಣಿ ಟೆಕ್ಕಿಯನ್ನು ಚಾಕುವಿನಿಂದ ಇರಿದು ಕೊಂದ ಮಾಜಿ ಪತಿ!

ಹೈದರಾಬಾದ್: ವ್ಯಕ್ತಿಯೊಬ್ಬ ಟೆಕ್ಕಿಯಾಗಿದ್ದ ತನ್ನ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್ನಲ್ಲಿ (Hyderabad) ನಡೆದಿದೆ.
ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಮಹಿಳೆಯೇ ಕಾರಣ ಎಂದು ವ್ಯಕ್ತಿ ಆರೋಪಿಸಿದ್ದಾನೆ. ಮಹಿಳೆಯ ಎರಡನೇ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ ಗರ್ಭಿಣಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ30 ರ ಹರೆಯದ ಕೊಲೆ ಆರೋಪಿ 2022 ರಲ್ಲಿ ಆ ಮಹಿಳೆಯನ್ನು ವಿವಾಹವಾಗಿದ್ದ. ಮದುವೆ ಭಾರತದಲ್ಲಿ ನಡೆದಿತ್ತು. ಆರೋಪಿ ನಂತರ ಕೆನಡಾಕ್ಕೆ ತೆರಳಿದ್ದ. ಅಲ್ಲಿ ಪತ್ನಿ ಜೊತೆ ವಾಸವಾಗಿದ್ದ. ದಂಪತಿ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗಿ ಮಹಿಳೆ ಭಾರತಕ್ಕೆ ವಾಪಸ್ ಆಗಿದ್ದರು.


ನಂತರ ಮಹಾರಾಷ್ಟ್ರದಲ್ಲಿ ಪತಿ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣ ದಾಖಲಿಸಿದ್ದರು.
ಈ ದಂಪತಿ 2024 ರಲ್ಲಿ ವಿಚ್ಛೇದನ ಪಡೆದರು. ಆ ಮಹಿಳೆ 2025 ರ ಏಪ್ರಿಲ್ನಲ್ಲಿ ಬೇರೊಬ್ಬ ವ್ಯಕ್ತಿ ಜೊತೆ ಮತ್ತೆ ವಿವಾಹವಾದರುತನ್ನ ತಾಯಿಯ ಮರಣದ ನಂತರ ಮಾಜಿ ಪತಿ 2025 ರ ಮಾರ್ಚ್ನಲ್ಲಿ ಭಾರತಕ್ಕೆ ಮರಳಿದರು. ಕೌಟುಂಬಿಕ ಹಿಂಸಾಚಾರ ಪ್ರಕರಣದ ಕಾರಣ ಆತನ ವಿರುದ್ಧ ಲುಕ್-ಔಟ್ ಸುತ್ತೋಲೆ ಹೊರಡಿಸಲಾಯಿತು. ಆತನ ಪಾಸ್ಪೋರ್ಟ್ ಅನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಾರಣದಿಂದಾಗಿ, ಆತ ಕೆನಡಾಕ್ಕೆ ಹಿಂತಿರುಗಲು ಸಾಧ್ಯವಾಗಲಿಲ್ಲ. ಆತ ನಿರುದ್ಯೋಗಿಯಾಗಿದ್ದ. ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ತನ್ನ ಹೆತ್ತವರ ಮನೆಯಲ್ಲಿ ವಾಸಿಸುತ್ತಿದ್ದ.
ಮಾಜಿ ಪತ್ನಿಯಿಂದಾಗಿ ತಾನು ಮತ್ತು ತನ್ನ ಕುಟುಂಬ ಮಾನಸಿಕ ನೋವನ್ನು ಅನುಭವಿಸಿದೆ. ಈ ನೋವು ನನ್ನ ತಾಯಿಗೆ ಕಾರಣವಾಯಿತು ಎಂದು ಭಾವಿಸಿದ್ದ ವ್ಯಕ್ತಿ ತನ್ನ ಮಾಜಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.