Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಧ್ಯಮ ಕ್ಷೇತ್ರದ ಸೇವೆಗೆ ವಿದಾಯ -ಸಂದೀಪ್ ಪೂಜಾರಿ ವಿಧಿವಶ

Spread the love

ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂದೀಪ್ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಅಪಘಾತದಲ್ಲಿ ಸಂದೀಪ್ ಅವರ ಬೆನ್ನು ಹುರಿ (ಸ್ಟೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾಪು ತಾಲೂಕಿನ ಶಿರ್ವ ನಿವಾಸಿಯಾಗಿರುವ ಸಂದೀಪ್ ಅವರು, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನಾ ಸುದ್ದಿ ವಾಹಿನಿಯಲ್ಲಿ ಕ್ಯಾಮೆರಮೆನ್, ಬಿ ಟಿವಿಯ ಕ್ಯಾಮೆರಮೆನ್ ಹಾಗೂ ವರದಿಗಾರರಾಗಿ ಇವರು ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ಈಟಿವಿ ಭಾರತ್ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೆ ಲೈವ್ ವಾಹಿನಿಗಳಾದ ಸಿ4ಯು, ಪ್ರೈಮ್ ಕಾರ್ಲದಲ್ಲಿ ತಂತ್ರಜ್ಞರಾಗಿ ಇವರು ಸೇವೆ ಸಲ್ಲಿಸುತ್ತಿದ್ದರು.

ಇವರು ತಂದೆ ತಾಯಿ ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *