Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಫರಿದಾಬಾದ್: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ರಾಣಿ ಪದ್ಮಿನಿ ಫೋಟೋ; ದೇಶಾದ್ಯಂತ ಭಾರಿ ಆಕ್ರೋಶ

Spread the love

ಫರಿದಾಬಾದ್: ಹಿಂದೂಗಳ ಆರಾಧ್ಯ ದೈವ, ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಾಹಸಿ ಮಹಿಳೆ ಮಹಾರಾಣಿ ಪದ್ಮಿನಿ (ಪದ್ಮಾವತಿ) ಅವರ ಭಾವಚಿತ್ರಗಳನ್ನು ಅವಮಾನಕರ ರೀತಿಯಲ್ಲಿ ಬಳಸಿದ ಘಟನೆ ಹರಿಯಾಣದ ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿದೆ. ಇದು ಹಿಂದೂ ಸಂಘಟನೆಗಳು ಮತ್ತು ಇತಿಹಾಸ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ಯಾಂಕ್ವೆಟ್ ಹಾಲ್‌ನ ಶೌಚಾಲಯದ ಬಾಗಿಲುಗಳ ಮೇಲೆ ಪುರುಷ ಮತ್ತು ಮಹಿಳಾ ವಿಭಾಗವನ್ನು ಗುರುತಿಸಲು ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಬಳಸಲಾಗಿತ್ತು. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ, ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ಇದು ಕೇವಲ ಚಿತ್ರಗಳ ಬಳಕೆಯಲ್ಲ, ಬದಲಾಗಿ ಭಾರತೀಯ ಇತಿಹಾಸ ಮತ್ತು ಹಿಂದುತ್ವದ ಆಸ್ಮಿತೆಗೆ ಮಾಡಿದ ಅಪಚಾರ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. : “ನಮ್ಮ ಇತಿಹಾಸದ ವೀರ ಪುರುಷರು ಮತ್ತು ಮಹಿಳೆಯರು ನಮಗೆ ಪೂಜನೀಯರು. ಅವರನ್ನು ಶೌಚಾಲಯದ ಬಾಗಿಲಿಗೆ ಬಳಸುವುದು ಅಕ್ಷಮ್ಯ ಅಪರಾಧ,” ಎಂದು ನೆಟ್ಟಿಗರು ಕಟುವಾಗಿ ಟೀಕಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *