ಬೀದಿ ನಾಯಿಗಳ ಮಾರಣಾಂತಿಕ ಕಡಿತ: 5 ವರ್ಷದ ಬಾಲಕನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೀದಿ ನಾಯಿಗಳ ಮಾರಣಾಂತಿಕ ಕಡಿತಕ್ಕೆ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ನಗರದ ಕೆಸ್ಆರ್ಟಿಸಿ ಕಾಲೋನಿಯಲ್ಲಿ ನಡೆದಿದೆ.

ಇಲ್ಲಿನ ಸಾಯಿ ಅನ್ವೇಷ ವನಹಳ್ಳಿ (5) ನಾಯಿಗಳ ಕಡಿತಕ್ಕೆ ಒಳಗಾದ ಬಾಲಕನಾಗಿದ್ದು, ಕಾಲು, ಕುತ್ತಿಗೆ ಬಾಗಕ್ಕೆನಾಯಿ ಕಡಿತದಿಂದ ಬಾಲಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇಲ್ಲಿನ ವಾರ್ಡ್ನಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ, ಕೂಡಲೇ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.