Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯುವತಿಯ ವಿಚಾರಕ್ಕೆ ಬೇಕರಿ ಬಳಿಯೇ ಮಾಜಿ ಸದಸ್ಯನ ಕೊಚ್ಚಿ ಕೊಂದ ತಂದೆ-ಮಗ

Spread the love

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ಸಂಭವಿಸಿದೆ. ಹಳೆ ದ್ವೇಷ ಅಥವಾ ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಗ್ರಾಮ ಪಂಚಾಯತಿ ಸದಸ್ಯನನ್ನು ತಂದೆ ಮತ್ತು ಮಗ ಸೇರಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್ ನಿವಾಸಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆತಾಉಲ್ಲಾ (43) ಕೊಲೆಯಾದ ದುರ್ದೈವಿ. ಬುಧವಾರ ತಡರಾತ್ರಿ ಆತಾಉಲ್ಲಾ ಅವರು ಸ್ಥಳೀಯ ಬೇಕರಿಯೊಂದರ ಬಳಿ ನಿಂತಿದ್ದಾಗ, ಹಿಂಬದಿಯಿಂದ ಬಂದ ಆರೋಪಿಗಳು ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾರೆ. ಮೈಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರಿಂದ ತೀವ್ರ ರಕ್ತಸ್ರಾವವಾಗಿ ಆತಾಉಲ್ಲಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಕೃತ್ಯ ಎಸಗಿದವರು ನಲ್ಲೂರು ಕ್ಯಾಂಪ್‌ನ ದಸ್ತಗಿರಿ ಮತ್ತು ಆತನ ಮಗ ಜಬಿಉಲ್ಲಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಇಬ್ಬರೂ ಆರೋಪಿಗಳು ಚನ್ನಗಿರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಯುವತಿಯೊಬ್ಬರ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ತಂಡಗಳ ನಡುವೆ ವೈಮನಸ್ಸು ಇತ್ತು ಎಂದು ಹೇಳಲಾಗುತ್ತಿದೆ. ಇದೇ ವಿಚಾರವಾಗಿ ಈ ಭೀಕರ ಹತ್ಯೆ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *