Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮಹತ್ಯೆ: ಪೋಷಕರ ಆಕ್ರೋಶ!

Spread the love

ಬೆಂಗಳೂರು: ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದಿದ್ದ ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ಥ ಅಪ್ರಾಪ್ತ ಬಾಲಕಿಯನ್ನು 17 ವರ್ಷದ ತೇಜಸ್ವಿನಿ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಅಂಚೇಪಾಳ್ಯದ ಪ್ರಕೃತಿ ಲೇಔಟ್ ನಿವಾಸಿ ತೇಜಸ್ವಿನಿ (17)ಗೆ ಕಳೆದ ಕೆಲವು ದಿನಗಳಿಂದ ಯುವಕನೋರ್ವ ಪ್ರೀತಿಯ ಹೆಸರಿನಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಕಿರುಕುಳ ತಾಳಲಾರದೆ ಮನನೊಂದ ಬಾಲಕಿ, ತನ್ನ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಮಗಳ ಸಾವಿಗೆ ಅವನೇ ಕಾರಣ

ಇನ್ನು ಮಗಳ ಸಾವಿನಿಂದ ಆಕ್ರೋಶಗೊಂಡಿರುವ ಪೋಷಕರು, ಯುವಕನ ಕಿರುಕುಳವೇ ತನ್ನ ಮಗಳ ಸಾವಿಗೆ ನೇರ ಕಾರಣ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳ ನೀಡಿದ ಯುವಕನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *