ಆಸ್ಪತ್ರೆಯ ಲಿಫ್ಟ್‌ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ದುರ್ಮರಣ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ನಾಸಿಕ್‌ನ ವೈದ್ಯಕೀಯ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ಆಘಾತಕಾರಿ ಮತ್ತು ಹೃದಯವಿದ್ರಾವಕ ಘಟನೆ ನಡೆದಿದ್ದು,ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್‌ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್‌ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ.
ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.
