ಸುಹಾಸ್ ಶೆಟ್ಟಿ ಹತ್ಯೆ:ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ FIR

ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಎಂಬ ಮಹಿಳೆಯ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶ್ವೇತಾ ಪೂಜಾರಿ ತನ್ನ ಫೇಸ್ಟುಕ್ ಖಾತೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬುರ್ಖಾಧಾರಿ ಮಹಿಳೆಯರನ್ನು ನಮಗೆ ತಂದೊಪ್ಪಿಸಿ, ಅವರನ್ನು ಯುವಮೋರ್ಚಾದ ಮಹಿಳೆಯರು ನೋಡಿಕೊಳ್ಳುತ್ತೇವೆಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೋಟೋ ತೋರಿಸಿ ಗೂಂಡಾ ಮುಂತಾದ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದು , ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.
ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.