Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಮಾಜದಲ್ಲಿ ದ್ವೇಷ ಬಿತ್ತುವವರ ಮೇಲೆ FIR: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Spread the love

ಮಂಗಳೂರು/ಬೆಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು (Hatred Speech) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಅವರ ಭಾಷಣದ ಬಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್‌ಐಆರ್ ದಾಖಲಾಗುತ್ತದೆ. ಅವರು ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್‌ಐಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್‌ಐಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್‌ಐಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್‌ಐಟಿ ಹೇಳಿದೆ ಎಂದು ಗೃಹಸಚಿವರು ತಿಳಿಸಿರುವುದಾಗಿ ಹೇಳಿದರು. 

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹೈಕಮಾಂಡ್‌ನದ್ದೇ ಅಂತಿಮ ತೀರ್ಮಾನ:
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *