ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ – ದಾಖಲೆಗಳು ಭಸ್ಮ

ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು ಸಂಭವಿಸಿದೆ.

ಮಂಗಳೂರು:ಶಾರ್ಟ್ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ ವಾತವರಣ ನಿರ್ಮಿತವಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರ ಬಂದಿದ್ದಾರೆ. ಮಧ್ಯಾಹ್ನವಾದ್ದರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆ ಇತ್ತು. ಹಾಗಾಗಿ ಭಾರೀ ಅನಾಹುತ ತಪ್ಪಿದೆ. ಆದರೂ, ಈ ಬೆಂಕಿ ಅವಘಡದ ಪರಿಣಾಮವಾಗಿ ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಸುಟ್ಟುಹೋಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿ ಶಾಮಕ ದಳದ ಸಿಬಂದಿ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.